ಮಹತ್ವದ ಸುದ್ದಿ….9,10ನೇ ತರಗತಿ ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ; ಪೋಷಕರ ಅನುಮತಿ ಪತ್ರ ಕಡ್ಡಾಯ

ಬೆಂಗಳೂರು: ಆಗಸ್ಟ್ 23ರಿಂದ ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಡ ಶಾಲೆಗಳಲ್ಲಿನ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿ, ಬೋಧನಾ ತರಗತಿಗಳನ್ನು ನಡೆಸಲು, ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. 2021-22ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭ ಕುರಿತಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿದಂತೆ, ದಿನಾಂಕ 23-08-2021ರಿಂದ ರಾಜ್ಯದಲ್ಲಿ ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9ನೇ ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ.
ಆಗಸ್ಟ್ 23ರಿಂದ 9, 10ನೇ ತರಗತಿ ಪ್ರಾರಂಭಕ್ಕೆ ರಾಜ್ಯ ಸರ್ಕಾರದ ಗೈಡ್​ಲೈನ್ಸ್​ನಲ್ಲಿ ಪ್ರತಿದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗೆ ಅವಕಾಶ ನೀಡಲಾಗಿದೆ. ಶಾಲೆಗೆ ವಿದ್ಯಾರ್ಥಿಗಳು ಮನೆಯಿಂದಲೇ ಊಟ ತರಬೇಕು. ಶಾಲೆಗೆ ಬರುವುದಕ್ಕೆ ಪೋಷಕರ ಅನುಮತಿ ಪತ್ರ ತರಬೇಕು. ಶಾಲೆಯಲ್ಲಿ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸೋಮವಾರದಿಂದ ಶುಕ್ರವಾರದ ವರೆಗೆ ಅರ್ಧದಿನ ಅಂದರೆ, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ತರಗತಿ ನಡೆಯಲಿದೆ. ಶನಿವಾರ ಬೆಳಗ್ಗೆ 10ರಿಂದ ಮ.12.50ರ ವರೆಗೆ ತರಗತಿಗಳು ನಡೆಯಲಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ವಿದ್ಯಾರ್ಥಿಗಳಿಗೆ ಭೌತಿಕ ಹಾಜರಾತಿ ಕಡ್ಡಾಯವಿರುವುದಿಲ್ಲ. ಮಗುವಿಗೆ ಕೊರೊನಾ ಲಕ್ಷಣದ ಇಲ್ಲದಿರುವುದನ್ನು ಕುರಿತು ಪೋಷಕರು ದೃಢಪಡಿಸಬೇಕು ಎಂದು ಗೈಡ್​ಲೈನ್ಸ್​ ತಿಳಿಸಿದೆ.
1 ರಿಂದ 8ನೇ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ನಂತರ ನಿರ್ಧರಿಸಲಾಗುತ್ತದೆ ಎಂದು ಹೇಳಲಾಗಿದೆ.
ಕೋವಿಡ್-19ರ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಪರ್ಯಾಯ ವಿಧಾನದಲ್ಲಿ ಕಲಿಕೆ ಮತ್ತು ಬೋಧನಾ ಪ್ರಕ್ರಿಯೆಗಳನ್ನು ಮುಂದುವರೆಸಲು ತಿಳಸಲಾಗಿದೆ.

9 ಮತ್ತು 10ನೇ ತರಗತಿ ಆರಂಭಿಸಲು ಮಾರ್ಗಸೂಚಿಗಳು

* ಶೇ.2ಕ್ಕಿಂತ ಕಡಿಮೆ ಸೋಂಕಿನ ಪ್ರಮಾಣ ಇರುವ ಜಿಲ್ಲೆಗಳಲ್ಲಿ 9 ಮತ್ತು 10ನೇ ತರಗತಿಗಳನ್ನು ದಿನಾಂಕ 23-08-2021ರಿಂದ ಪ್ರತಿ ದಿನ ಅರ್ಧ ದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸುವುದು.

*ಶಾಲೆ ಪ್ರಾರಂಭಿಸಲು ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.

*ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ. ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳಿರುವುದಿಲ್ಲ ಎಂದು ದೃಢೀಕರಿಸಬೇಕು.

*ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲಿ ಹಾಜರಾಗಬಹುದು.
ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್ ಲೈನ್, ಇತರೆ ಪರ್ಯಾಯ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಬೇಕು.

*9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು, ಉಪಾಹಾರವನ್ನು ತರುವುದು

*ಅವಶ್ಯಕತೆ ಅನುಸಾರ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿನೀರಿನ ವ್ಯವಸ್ಥೆ ಮಾಡುವುದು.

 

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement