ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ

ಹುಬ್ಬಳ್ಳಿ: ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸದಿಂದ ಪರಿಸ್ಥಿತಿ ಹತೋಟಿ ಮೀರಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಇಂದು (ಮಂಗಳವಾರ) ಮಾತನಾಡಿದ ಅವರು, ಆಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಗೆ ನಮ್ಮ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ನಡೆಸಿದೆ ಎಂದು ತಿಳಿಸಿದರು.
ಸದ್ಯ ಅಲ್ಲಿನ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಆಫ್ಘಾನಿಸ್ತಾನದಲ್ಲಿ ಏರೋಸ್ಪೇಸ್‍ಅನ್ನು ಸಹ ಬಂದ್ ಮಾಡಲಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಭಾರತೀಯರನ್ನು ದೇಶಕ್ಕೆ ಕರೆತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮುಂದುವರಿಸಿದೆ ಎಂದರು.. ಆಫ್ಘಾನಿಸ್ತಾನದಲ್ಲಿರುವ ಭಾರತದ ಪ್ರತಿಯೊಬ್ಬ ಪ್ರಜೆಯ ಬಗ್ಗೆಯೂ ಸರ್ಕಾರದ ಕಾಳಜಿ ವಹಿಸುತ್ತಿದೆ.
ಮೋದಿ ನೇತೃತ್ವದ ಸರ್ಕಾರ ಎಲ್ಲ ಸಮಸ್ಯೆಗಳನ್ನೂ ನಿಭಾಯಿಸಲು ಶಕ್ತಿಯುತವಾಗಿದೆ. ಕಳೆದ ಏಳು ವರ್ಷಗಳಲ್ಲಿ ದೇಶದ ಒಳಗೆ ಒಂದೇ ಒಂದು ಉಗ್ರ ಚಟುವಟಿಕೆ ನಡೆಸಲು ಬಿಟ್ಟಿಲ್ಲ. ಗಡಿಯಲ್ಲಿ ಸಣ್ಣಪುಟ್ಟ ಘಟನೆಗಳು ನಡೆದಿರುವುದನ್ನು ಬಿಟ್ಟರೆ ದೇಶದ ಒಳಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಉಗ್ರಗಾಮಿಗಳ ವಿಷಯದಲ್ಲಿ ಜೀರೋ ಟಾಲರೆನ್ಸ್ ಘೋಷಣೆ ನಮ್ಮದಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ‌ ನೇತೃತ್ವದಲ್ಲಿ ಭಾರತೀಯರ ರಕ್ಷಣೆಯ ಪ್ರಯತ್ನದಲ್ಲಿದ್ದೇವೆ. ಅಲ್ಲಿಯ ಜನರ ಜೀವನ ಕಾಪಾಡುವುದು ಅತ್ಯವಶ್ಯಕವಿದೆ. ಅಮೆರಿಕಾ ಸರ್ಕಾರ ಜನರ ರಕ್ಷಣೆ ಬಗ್ಗೆ ಕಾಳಜಿ ತೋರಬೇಕು ಎಂದರು.
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಗುರುವಾರ ಪ್ರಕಟಿಸಲಿದೆ. ವಾರ್ಡ್ ಅಧ್ಯಕ್ಷರ ಮೂಲಕ ಬರುವ ಆಕಾಂಕ್ಷಿಗಳ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. . ಅವರು ಅರ್ಜಿಗಳನ್ನು ಮಂಡಲ ಅಧ್ಯಕ್ಷರಿಗೆ ನೀಡುತ್ತಾರೆ. ಅವರು ಅವುಗಳನ್ನು ಸ್ಕ್ರೀನಿಂಗ್ ಕಮಿಟಿಗೆ ನೀಡುತ್ತಾರೆ. ಗುರುವಾರ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು ಎಂದರು.
ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿ ಅಸ್ತಿತ್ವದಲ್ಲಿಲ್ಲ. ಅದರ ಅಸ್ತಿತ್ವ ಕೇವಲ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಇದೆ ಎಂದು ಹೇಳಿದ ಅವರು, ಬಿಜೆಪಿಯಲ್ಲಿ ಟಿಕೆಟ್ ಗೆ ಅರ್ಜಿ ಪಡೆಯಲು ಶುಲ್ಕ ಪಡೆಯಲಾಗುತ್ತಿಲ್ಲ. ಕಾಂಗ್ರೆಸ್ ನಂತೆ ಅರ್ಜಿಯಿಂದ ಹಣ ಮಾಡುವ ಅನಿವಾರ್ಯತೆ ನಮ್ಮ ಪಕ್ಷಕ್ಕೆ ಇಲ್ಲ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   'ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement