ಅಫ್ಘಾನ್ ಬಿಕ್ಕಟ್ಟು; ಭಾರತಕ್ಕೆ ಬರುವ ಅಫ್ಘನ್ನರ ಅರ್ಜಿಗಳ ತ್ವರಿತ ಪರಿಶೀಲನೆಗೆ ಹೊಸ ಇ-ವೀಸಾ ಪರಿಚಯಿಸಿದ ಭಾರತ

ನವದೆಹಲಿ: ತಾಲಿಬಾನ್ ಕೈವಶವಾಗಿರುವ ಅಘ್ಫಾನಿಸ್ತಾನ ತೊರೆದು ಭಾರತಕ್ಕೆ ಮರಳುವ ಅಫ್ಘನ್ನರ ಅರ್ಜಿಗಳನ್ನು ತ್ವರಿತಗತಿಯಲ್ಲಿ ಸ್ವೀಕರಿಸಲು ಕೇಂದ್ರ ಸರ್ಕಾರ ಮಂಗಳವಾರ ಹೊಸ ವರ್ಗದ ಎಲೆಕ್ಟ್ರಾನಿಕ್ ವೀಸಾ ನೀಡುವ ಘೋಷಣೆ ಮಾಡಿದೆ.
ಈ ಹೊಸ ವೀಸಾ ವರ್ಗಕ್ಕೆ “e-Emergency X-Misc Visa” ಎಂದು ಕರೆಯಲಾಗಿದೆ. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಸಾವಿರಾರು ಜನರು ಅಲ್ಲಿಂದ ಪಲಾಯನ ಮಾಡುತ್ತಿದ್ದಾರೆ.
ಅಫ್ಘಾನಿಸ್ತಾನದ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗೃಹ ವ್ಯವಹಾರಗಳ ಸಚಿವಾಲಯ ವೀಸಾ ನಿಬಂಧನೆಗಳನ್ನು ಪರಿಶೀಲಿಸುತ್ತಿದೆ. ಭಾರತಕ್ಕೆ ಬರುವವರ ಅರ್ಜಿಯನ್ನು ವೇಗವಾಗಿ ಪರಿಶೀಲಿಸಲು ಎಲೆಕ್ಟ್ರಾನಿಕ್ ವೀಸಾದ ಹೊಸ ವರ್ಗದ “ಇ ಎಮರ್ಜೆನ್ಸಿ ವೀಸಾ” ವಿಭಾಗವನ್ನು ಪರಿಚಯಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ಈ ಕುರಿತು ಟ್ವೀಟ್ ಮಾಡಿದ್ದಾರೆ.
20 ವರ್ಷಗಳ ನಂತರ ಅಫ್ಘಾನ್‌ನಿಂದ ಅಮೆರಿಕ ತನ್ನ ಸೇನಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿದ್ದಂತೆ ತಾಲಿಬಾನಿಗಳು ಆಕ್ರಮಣ ಮಾಡಿ ಅಫ್ಘಾನಿಸ್ತಾನನ್ನು ವಶಪಡಿಸಿಕೊಂಡಿದ್ದಾರೆ. ದೇಶದಿಂದ ಸಾವಿರಾರು ಮಂದಿ ಓಡಿಹೋಗಲು ಕಾಬೂಲ್ ವಿಮಾನ ನಿಲ್ದಾಣದತ್ತ ನುಗ್ಗುತ್ತಿದ್ದಾರೆ. ಅಫ್ಘಾನಿಸ್ತಾನದಲ್ಲಿ ಕಳೆದ ಕೆಲವು ತಿಂಗಳಿಂದ, ಅಂದರೆ ಅಮೆರಿಕ ಮಿಲಿಟರಿ ಹೊರ ಹೋಗಲು ತೀರ್ಮಾನಿಸಿದ ಬಳಿಕ ತಾಲಿಬಾನ್‌ನ ಸಶಸ್ತ್ರದಳ ಅನೇಕ ಪ್ರದೇಶಗಳಿಗೆ ನುಗ್ಗಿ ಹಿಂಸೆ ನಡೆಸುತ್ತಿದೆ.
ಹೀಗಾಗಿ ಅಫ್ಘಾನಿಸ್ತಾನದಲ್ಲಿನ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆ ಹಾಗೂ ಅಲ್ಲಿ ಭಾರತದ ಹಿತಾಸಕ್ತಿ ಕಾಪಾಡಲು ಬೇಕಾದ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದು ವಿದೇಶಾಂಗ ಇಲಾಖೆ ಸೋಮವಾರ ಹೇಳಿಕೆ ನೀಡಿದೆ. ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ನಿರಂತರವಾಗಿ ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಭಾರತೀಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.
ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ವಿ, ಭಾರತ ಅಫ್ಘಾನಿಸ್ತಾನದ ಸಿಖ್ ಮತ್ತು ಹಿಂದೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿದೆ. ಆ ದೇಶ ತೊರೆಯಲು ಇಚ್ಚಿಸುವವರನ್ನು ವಾಪಸ್ ಕರೆಸಿಕೊಳ್ಳಲು ಅನುಕೂಲ ಮಾಡಿಕೊಡುತ್ತೇವೆ” ಎಂದು ಹೇಳಿದ್ದಾರೆ.
ಅಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ ಆತಂಕ ಮೂಡಿಸಿದೆ. ಕಾಬೂಲ್ ನಲ್ಲಿ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಸೇರಿದಂತೆ ಸುಮಾರು 200 ಭಾರತೀಯರು ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ. ಸದ್ಯ ಐಟಿಬಿಪಿ ಸಿಬ್ಬಂದಿ ಭಾರತೀಯರಿಗೆ ರಕ್ಷಣೆಯನ್ನು ನೀಡುತ್ತಿದ್ದಾರೆ. ಅವರನ್ನು ಶೀಘ್ರವೇ ಸುರಕ್ಷಿತವಾಗಿ ಕರೆಸಿಕೊಳ್ಳಲಾಗುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಅಲ್ಬೇನಿಯಾ, ಆಸ್ಟ್ರೇಲಿಯಾ, ಆಸ್ಟ್ರಿಯಾ, ಬಹಮಾಸ್, ಬೆಲ್ಜಿಯಂ, ಬುರ್ಕಿನಾ ಫಾಸೊ, ಕೆನಡಾ, ಚಿಲಿ, ಕೊಲಂಬಿಯಾ ಸೇರಿದಂತೆ ವಿವಿಧದ ದೇಶಗಳು ಒಟ್ಟಾಗಿ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಅಂತಾರಾಷ್ಟ್ರೀಯ ಸಮುದಾಯವಾಗಿ ನಾವು ಅಫಘಾನ್‌ ನಿರಾಶ್ರಿತರಿಗೆ ಎಲ್ಲಾ ರೀತಿಯ ನೆರವನ್ನು ನೀಡಲು ಸಿದ್ಧ ಎಂದು ಪ್ರಕಟಣೆಯಲ್ಲಿ ತಿಳಿಸಿವೆ.ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸೋಮವಾರ ತುರ್ತು ಸಭೆ ನಡೆಸಿದೆ.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement