ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,298 ಜನರಿಗೆ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಮಂಗಳವಾರ) ಹೊಸದಾಗಿ 1,298 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 32 ಜನರ ಸಾವು ಸಂಭವಿಸಿದೆ.
ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,31,827 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,73,281 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. . ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,039 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 21,481 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 340 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12,33,512 ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾ ಸೋಂಕಿಗೆ 10 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,951 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,913 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

17-08-2021 HMB Kannada

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement