ಕುಮಟಾ: ಯಕ್ಷಗಾನ ಕಲಾವಿದ ಗೋಪಾಲ ಗೌಡ ನಿಧನ

ಕುಮಟಾ: ಉತ್ತರಕನ್ನಡ ಜಿಲ್ಲೆ ಯಕ್ಷಗಾನ ಕಲಾವಿದ ಕುಮಟಾ ತಾಲೂಕಿನ ಕಂದವಳ್ಳಿ ಗೋಪಾಲ ಗೌಡ (29 ವರ್ಷ) ಆಗಸ್ಟ್ 14ರಂದು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಮಂಗಳವಾರ (ಆಗಸ್ಟ್‌ 17ರಂದು) ಅವರ ಮೃತದೇಹ ಕುಮಟಾ ಹೆಡ್ ಬಂದರ್ ಬೀಚ್ ಬಳಿ ದೊರಕಿದೆ.
ಕುಮಟಾ ಹಾಗೂ ಹೊನ್ನಾವರದ ಮಧ್ಯೆ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಕರ್ಕಿ ಸಮೀಪದ ನಡುಗಡ್ಡೆ ಬಸವರಾಜ ದುರ್ಗದ ಸಮೀಪ ಮೀನುಬೋಟಿನಿಂದ ಆಕಸ್ಮಾತ್ತಾಗಿ ನೀರಿಗೆ ಬಿದ್ದು ಆಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಿರಲಿಲ್ಲ. ಇಂದು (ಮಂಗಳವಾರ) ಅವರ ಶವ ಕುಮಟಾ ಹೆಡ್‌ ಬಂದರಿನ ಸಮೀದ ಬೀಚಿನಲ್ಲಿ ಪತ್ತೆಯಾಗಿದೆ.
ಗೋಪಾಲ ಗೌಡ ಅವರು ಹಿರಿಯ ಯಕ್ಷಗಾನ ಕಲಾವಿದ ಲಕ್ಷ್ಮಣ ಕಾಂಚನರ ಪ್ರೇರಣೆಯಿಂದ ಯಕ್ಷಗಾನವನ್ನು ಕಲಿತು ಸಿಗಂದೂರು, ಮಡಾಮಕ್ಕಿ, ಮೇಗರವಳ್ಳಿ, ಹಟ್ಟಿಯಂಗಡಿ, ಈಗ ಬೊಳ್ಳಂಬಳ್ಳಿ ಮೇಳದಲ್ಲಿ ಒಟ್ಟು 13 ವರ್ಷ ಕಲಾಸೇವೆಗೈದಿದ್ದರು. ಅಭಿಮನ್ಯು, ಬಬ್ರುವಾಹನ ಮುಂತಾದ ವೇಷಗಳ ಜೊತೆಗೆ ಹೊಸ ಪ್ರಸಂಗದ ವಿಶಿಷ್ಟ ವೇಷಗಳನ್ನು ಕೂಡ ಸೊಗಸಾಗಿ ನಿರ್ವಹಿಸುತ್ತಿದ್ದರು.ಮೃತರು ತಂದೆ, ತಾಯಿ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement