
ಮಂಗಳೂರು : ಕೋವಿಡ್ ತಗುಲಿದೆ ಎಂಬ ಭಯದಲ್ಲಿ ದಂಪತಿ, ನಗರ ಪೊಲೀಸ್ ಕಮಿಷನರ್‌ಗೆ ವಾಟ್ಸ್‌ಆಪ್‌ನಲ್ಲಿ ಧ್ವನಿ ಮುದ್ರಣ ಕಳುಹಿಸಿ, ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೋವಿಡ್ ಬಂದಿರುವ ಕಾರಣಕ್ಕೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಕಳುಹಿಸಿರುವ ಧ್ವನಿ ಮುದ್ರಣದಲ್ಲಿ ಅವರು ತಿಳಿಸಿದ್ದರು.
ತಕ್ಷಣವೇ ಕರೆ ಮಾಡಿದರೂ ಆ ವ್ಯಕ್ತಿ ಕರೆ ಸ್ವೀಕರಿಸುತ್ತಿಲ್ಲದ ಕಾರಣ ಪೊಲೀಸ್ ಕಮಿಷನರ್ ಪುನಃ ಧ್ವನಿ ಮುದ್ರಣ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ಳದಂತೆ ವಿನಂತಿ ಮಾಡಿದ್ದಾರೆ. ಮತ್ತು ಆ ವ್ಯಕ್ತಿಯ ಬಗ್ಗೆ ತಿಳಿದವರು ಅವರನ್ನು ರಕ್ಷಿಸುವಂತೆ ವಿನಂತಿಸಿದ್ದರು. ಅವರು ಇರುವ ಸ್ಥಳದ ಲೊಕೇಷನ್ ಪತ್ತೆ ಮಾಡುವಲ್ಲಿ ಪೊಲೀಸರು ಸಾಕಷ್ಟು ಶ್ರಮಪಟ್ಟರು.
ಪಣಂಬೂರಿನ ಚಿತ್ರಾಪುರ ಬೀಚ್ ರಸ್ತೆಯಲ್ಲಿರುವ ಫ್ಲ್ಯಾಟ್ ಪತ್ತೆ ಮಾಡಿ, ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಎಂದು ಗುರುತಿಸಲಾಗಿದೆ. ಕೋವಿಡ್-19 ಸೋಂಕು ಮತ್ತು ಬ್ಲ್ಯಾಕ್ ಫಂಗಸ್ ಗೆ ಹೆದರಿ ಮೊದಲು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗುಣವತಿ ಸುವರ್ಣ ಅವರು ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮ ನೋವು ಹೇಳಿಕೊಂಡಿದ್ದಾರೆ. ಸ್ವತಃ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದೇನೆ. ದಿನಕ್ಕೆ ಎರಡು ಇನ್ಸುಲಿನ್ ಇಂಜೆಕ್ಷನ್ ಪಡೆದುಕೊಂಡರೂ ಸಕ್ಕರೆ ಕಾಯಿಲೆಯ ನಿಯಂತ್ರಣವಾಗುತ್ತಿಲ್ಲ, ಮಕ್ಕಳಾಗಿಲ್ಲ. ಎರಡು ಬಾರಿ ಗರ್ಭಿಣಿಯಾಗಿ ತೊದರೆ ಆಗಿತ್ತು. ಒಮ್ಮೆ ಮಗುವಾಗಿ 13 ದಿನದಲ್ಲಿ ತೀರಿಕೊಂಡಿತ್ತು. ನಾವು 2000 ಇಸವಿಯಲ್ಲಿ ಮದುವೆಯಾಗಿದ್ದು ಸುದೀರ್ಘ ಕಾಲದಿಂದ ನೋವು ಕಂಡಿದ್ದೇವೆ. ಗರ್ಭಿಣಿಯಾಗಿದ್ದ ಸಂದರ್ಭದಲ್ಲಿ ಸಕ್ಕರೆ ಕಾಯಿಲೆ ಉಂಟಾಗಿತ್ತು ಎಂದು ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಒಂದು ವಾರದಿಂದ ಕೋವಿಡ್ ಸೋಂಕಿನ ಲಕ್ಷಣ ಕಂಡುಬಂದಿದೆ. ಗಂಡನಿಗೂ ಅದೇ ರೀತಿಯ ಲಕ್ಷಣಗಳಿವೆ. ಟಿವಿಯಲ್ಲಿ ಬರುವ ಸುದ್ದಿಗಳನ್ನು ನೋಡಿ ಹೆದರಿದ್ದೇವೆ. ಹಾಗಾಗಿ ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದೇವೆ. ಮನೆ ಒಳಗಿನ ವಸ್ತುಗಳನ್ನು ಬಡವರಿಗೆ ನೀಡಿ ಎಂದು ಪತ್ರದಲ್ಲಿ ಬರೆಯಲಾಗಿದೆ.
ನಾನು ಮತ್ತು ಗಂಡ ನಿರ್ಧರಿಸಿದ ಪ್ರಕಾರ ಹಿಂದೂ ಸಂಘಟನೆಯವರು ನಮ್ಮ ಅಂತ್ಯಕ್ರಿಯೆಯನ್ನು ನಡೆಸಬೇಕು. ಅದಕ್ಕಾಗಿ ಒಂದು ಲಕ್ಷ ರೂ. ಇಟ್ಟಿದ್ದೇವೆ ಎಂದು ಬರೆಯಲಾಗಿದೆ.
ರಮೇಶ ಸುವರ್ಣ ಅವರು ಮಂಗಳೂರು ಪೊಲೀಸ್ ಆಯುಕ್ತರಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದು, ತಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಹೇಳಿಕೊಂಡಿದ್ದರು. ಕೂಡಲೇ ಪೊಲೀಸ್ ಆಯುಕ್ತರು ಆರ್ಯ ಅವರಿಗೆ ಪ್ರತಿಕ್ರಿಯಿಸಿ, ದುಡುಕಿನ ನಿರ್ಧಾರ ಮಾಡದಂತೆ ಮನವಿ ಮಾಡಿದ್ದಾರೆ. ಅಲ್ಲದೆ ಕಾರ್ಯಪ್ರವೃತ್ತರಾದ ಪೊಲೀಸ್ ಆಯುಕ್ತರು ಆ ಪ್ರದೇಶದ ಯಾರಾದರೂ ಇದ್ದರೆ ಅವರ ರಕ್ಷಣೆ ಮಾಡುವಂತೆ ಹೇಳಿದ್ದಾರೆ.ಅಲ್ಲದೆ 20 ನಿಮಿಷದಲ್ಲಿ ಪೊಲೀಸರ ತಂಡ ಅವರಿರುವ ಅಪಾರ್ಟ್ಮೆಂಟ್ ತಲುಪಿದ್ದರೂ ಅಷ್ಟರೊಳಗೆ ದಂಪತಿ ದಂಪತಿ ಮನೆಯ ಒಳಗೆ ಆತ್ಮಹತ್ಯೆ ಮಾಡಿಕೊಡಿರುವುದು ಬೆಳಕಿಗೆ ಬಂದಿದೆ.



ನಿಮ್ಮ ಕಾಮೆಂಟ್ ಬರೆಯಿರಿ