ಕರ್ನಾಟಕದಲ್ಲಿ ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ

ಬೆಂಗಳೂರು: ಕೊರೊನಾ ಆತಂಕದ ನಡುವೆಯೇ ನಾಳೆಯಿಂದ (ಆಗಸ್ಟ್ 19) ದ್ವಿತೀಯ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷೆಗಾಗಿ ಪಿಯು ಮಂಡಳಿ​ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕೊರೊನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಲಾಗಿದೆ.

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಶಿಕ್ಷಣ ಇಲಾಖೆಯು ತನ್ನ ಸಿದ್ಧತೆಗಳನ್ನು ಆರಂಭಿಸಿದ್ದು, ಖಾಸಗಿ ವಿದ್ಯಾರ್ಥಿಗಳಿಗೆ ಮತ್ತು ಜುಲೈನಲ್ಲಿ ನೀಡಿದ ಅಂಕಗಳ ಬಗ್ಗೆ ಅಸಮಾಧಾನ ಹೊಂದಿರುವವರಿಗೆ ಪರೀಕ್ಷೆ ನಡೆಸಲಾಗುತ್ತಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗಸ್ಟ್ 19ರಿಂದ ಸೆಪ್ಟೆಂಬರ್ 3ರ ವರೆಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 17469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್ , 5093 ಫ್ರೆಶರ್ಸ್ ವಿದ್ಯಾರ್ಥಿಗಳು ಇದ್ದಾರೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ 187 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೋವಿಡ್ ಸೋಂಕು ಇದ್ದರೆ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರೆ ಕೋವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.
ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ RT-PCR ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೇರಳ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ RT-PCR ಟೆಸ್ಟ್​​ನ್ನು ಕಡ್ಡಾಯವಾಗಿ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್​ ತರಬೇಕಿದೆ. 72 ಗಂಟೆಗಳ ನೆಗೆಟಿವ್ ರಿಪೋರ್ಟ್ ಕಡ್ಡಾಯ.
ಒಂದು ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಹತ್ತು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದ್ದು, ಒಂದು ಡೆಸ್ಕ್​​ನಲ್ಲಿ ಒಬ್ಬರಿಗೆ ಮಾತ್ರ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement