ಕೇಂದ್ರ ಸಚಿವರಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ: ಕೋವಿಡ್‌ ನಿಯಮ ಗಾಳಿಗೆ ತೂರಿದ ಬಿಜೆಪಿ ..!

ಯಾದಗಿರಿ: ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರ ಸ್ವಾಗತಕ್ಕೆ ಮುಗಿಬಿದ್ದಿದ್ದಲ್ಲದೆ ಅವರ ಸ್ವಾಗತಕ್ಕೆ ಬಂದೂಕಿನಿಂದ ಗುಂಡು ಹಾರಿಸಿ ಅತಿರೇಕದ ವರ್ತನೆ ತೋರಿದ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ.
ಸಚಿವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿರುವ ಕಾರಣ ಇದೀಗ ಎಫ್​ಐಆರ್ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಆಗಮಿಸಿದ್ದರು. ಈ ವೇಳೆ ಅವರ ಸ್ವಾಗತಕ್ಕೆ ಅಪಾರ ಪ್ರಮಾಣದ ಬಿಜೆಪಿ ಕಾರ್ಯಕರ್ತರು ಸೇರಿದ್ದರು ಹಾಗೂ ಕೋವಿಡ್‌ ನಿಯಮಾವಳಿಗಳನ್ನು ಗಾಳಿಗೆ ತೂರಿದ ಘಟನೆ ವರದಿಯಾಗಿದೆ. ಅಲ್ಲದೆ ಸಚಿವರ ಸ್ವಾಗತಕ್ಕೆ ನಾಡಬಂದೂಕಿನ ಜೊತೆ ಆಗಮಿಸಿದ್ದ ಕೆಲವರು ಗುಂಡು ಹಾರಿಸಿ ಸಂಭ್ರಮಿಸಿದ್ದಾರೆ.
ಸಾಮಾಜಿಕ ಅಂತರವಿಲ್ಲದೇ, ಮಾಸ್ಕ್ ಧರಿಸದೇ ಜನಜಾತ್ರೆಯೇ ನೆರೆದಿದ್ದ ಈ ಸ್ವಾಗತ ಸಭೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚಸನೂರು, ಶಾಸಕರಾದ ರಾಜೂಗೌಡ, ವೆಂಕಟರೆಡ್ಡಿ ಮುದ್ನಾಳ ಕೂಡ ಸ್ಥಳದಲ್ಲೇ ಇದ್ದರು ಎನ್ನಲಾಗಿದೆ. ಭಗವಂತ ಖೂಬಾಗೆ ಹೂವಿನ ಸುರಿಮಳೆ ಸುರಿಸಿ, ಬಂದೂಕಿನಿಂದ ಗುಂಡು ಹಾರಿಸಿ ಸ್ವಾಗತಿಸಿದ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜನರ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement