ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆ : ಎಫ್‌ಐಆರ್ ದಾಖಲು

ಥಾಣೆ: ಕೇಂದ್ರ ಸಚಿವ ಕಪಿಲ್ ಪಾಟೀಲ್ ನೇತೃತ್ವದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸರು ಸಂಘಟಕರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.
ಕೇಂದ್ರ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾದ ಮಹಾರಾಷ್ಟ್ರದ ಸಚಿವರು ರಾಜ್ಯದಲ್ಲಿ ಜನಾರ್ಶೀವಾದ ಯಾತ್ರೆ ಹಮ್ಮಿಕೊಂಡಿದ್ದು, ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕಪಿಲ್ ಪಾಟೀಲ್ ಅವರನ್ನು ನೂರಾರು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದ್ದರು.
ಈ ಸಂದರ್ಭದಲ್ಲಿ ಅಗ್ರಿ ಮತ್ತು ಕೋಲಿ ಸಮಾಜದವರು ಕುಣಿದು ಕುಪ್ಪಳಿಸಿದ್ದರು. ಮೆರವಣಿಗೆ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದರು. ಹೀಗಾಗಿ ಥಾಣೆಯ ಕೋಪ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮೆರವಣಿಗೆಯಲ್ಲಿ ನೂರಾರು ಜನ ಗುಂಪುಗೂಡಿದ್ದರು. ಹೀಗಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆ ಸಂಬಂಧ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಕೇಸ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement