ಮಹತ್ವದ ಸುದ್ದಿ.. ಪಿಯುಸಿ ತರಗತಿಗಳ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರವ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಶೇಕಡಾ 2ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ತೆರೆಯಲು ಸೂಚನೆ ನೀಡಲಾಗಿದ್ದು, ಏಕಕಾಲದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ನಡೆಸಲಾಗುವುದು ಎಂದು ಸರ್ಕರ ಹೇಳಿದೆ.
ವಾರದ ಮೊದಲ 3 ದಿನ ಶೇಕಡಾ 50ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಬೇಕು.
ಉಳಿದ ಶೇಕಡಾ 50 ರಷ್ಟು ವಿದ್ಯಾರ್ಥಿಗಳಿಗೆ ಮನೆಯಲ್ಲೇ ಆನ್​​ಲೈನ್​ ತರಗತಿ ನಡೆಸುವುದು. ಗುರುವಾರ, ಶುಕ್ರವಾರ, ಶನಿವಾರ ಉಳಿದ ವಿದ್ಯಾರ್ಥಿಗಳಿಗೆ ತರಗತಿ​ ನಡೆಸುವ ಬಗ್ಗೆ ಸೂಚನೆ ಕೊಡಲಾಗಿದೆ.
ಆಗಸ್ಟ್ 23 ರಿಂದ ಪಿಯು ಕಾಲೇಜು ತರಗತಿಗಳು ಆರಂಭವಾಗಲಿದ್ದು, ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿ ಏಕಕಾಲಕ್ಕೆ ಆರಂಭ ಆಗಲಿದೆ. ಕಾಲೇಜು ಆರಂಭಿಸುವ ಕುರಿತು ರಾಜ್ಯ ಸರ್ಕಾರದ ಮಾರ್ಗಸೂಚಿ ಇಲ್ಲಿದೆ.

* ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೋಷಕರ ಒಪ್ಪಿಗೆ ಇರಬೇಕು.

* ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೊವಿಡ್​​- 19 ನೆಗೆಟಿವ್ ವರದಿ ಕಡ್ಡಾಯ.
* ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100ಕ್ಕಿಂತ ಕಡಿಮೆ ಇರಬೇಕು.
* ಮಾಸ್ಕ್ ಹಾಗೂ ಸ್ಯಾನಿಟೈಸರ್ ಕಡ್ಡಾಯ ಬಳಕೆ .
* ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು.
* ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತದೆ.
* ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಕಾಲೇಜು ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು.
* ಕಾಲೇಜಿನ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೋವಿಡ್ ನಿಯಮಗಳ       ಉಲ್ಲಂಘನೆಯಾಗದಂತೆ ಗಮನಿಸಬೇಕು.
* ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಬೇಕು.
* ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
* ಕೋವಿಡ್​ ಸೋಂಕಿತರಿಗೆ ಬಳಸಿದ ಕಟ್ಟಡಗಳನ್ನು ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು.
* ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು.

ರಾಜ್ಯದಲ್ಲಿ 21,266 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ.0.76ರಷ್ಟಿದೆ. ಇ

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement