ವಾಯುಭಾರ ಕುಸಿತ; ಕರ್ನಾಟಕದ 8 ಜಿಲ್ಲೆಗಳಲ್ಲಿ 3 ದಿನ ಮಳೆ ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಬುಧವಾರದಿಂದ (ಆಗಸ್ಟ್‌ 18ರಿಂದ) ಅಧಿಕ ಮಳೆಯಾಗಲಿದೆ ಎಂದು ಅದು ತಿಳಿಸಿದೆ. ಕರ್ನಾಟಕದ ಕರಾವಳಿ ಜಿಲಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮತ್ತು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿರಾಜ್ಯದಲ್ಲಿ ಆಗಸ್ಟ್‌ 20ರವರೆಗೂ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ, ಗದಗ, ಬೀದರ್, ಬಾಗಲಕೋಟೆ, ವಿಜಯನಗರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು ನಗರ ಪ್ರದೇಶದಲ್ಲಿ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಾಗಲಿದೆ ಎಂದು ತಿಳಿಸಿದೆ. ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement