ಹೊನ್ನಾವರ: ಉತತರ ಕನ್ನಡ ಜಿಲ್ಲೆ ಹೊನ್ನಾವರ ಕಾಲೇಜು ಸಮೀಪದ ಮೂರುಕಟ್ಟೆಯ ಬಳಿ ಬೈಕ್ ಮತ್ತು ಆಲ್ಟೊ ಕಾರ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟ ವರದಿಯಾಗಿದೆ.
ರಸ್ತೆಯಲ್ಲಿದ್ದ ದನ ತಪ್ಪಿಸಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಾರುತಿ ಆಲ್ಟೊ ಕಾರ್ ಚಾಲಕ ದನ ತಪ್ಪಿಸಲು ಹೋದ ಸಂದರ್ಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನ ವಲ್ಕಿಯ ಅನ್ಸಾರ್ ಅಬ್ದುಲ್ ರೆಹಮಾನ್ ಬೊಂಗ್ಯಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೈಕ್ ನಲ್ಲಿ ಇಬ್ಬರು ಸವಾರರಿದ್ದು ಇನ್ನೋರ್ವರಿಗೆ ಗಾಯಗಳಾಗಿದೆ ಎನ್ನಲಾಗಿದೆ. ಹೊನ್ನಾವರದಿಂದ ವಲ್ಕಿ ಕಡೆಗೆ ಹೋಗುತ್ತಿದ್ದಾಗ ಮೂರುಕಟ್ಟೆ ಬಳಿ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ಘಟನೆಗೆ ಸಂಬoಧಿಸಿದoತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ