ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಾಂಕದಂದು ಉಚಿತ ಪ್ರಯಾಣ ಕಲ್ಪಿಸಿದ ಸಾರಿಗೆ ಸಂಸ್ಥೆ

ಹುಬ್ಬಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅವಕಾಶ ಕಲ್ಪಿಸಿದೆ.
19.08.2021 ರಿಂದ 03.09.2021ರ ವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಮತ್ತು ಹಿಂತಿರುಗುವಾಗ “ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement