ಮಂತ್ರಾಲಯದಲ್ಲಿ ಗುರು ರಾಯರ 350ನೇ ಆರಾಧನೆ; ಆ.21ರಿಂದ 27ರ ವರೆಗೆ ಸಪ್ತ ರಾತ್ರೋತ್ಸವ

ರಾಯಚೂರು: ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿಆಗಸ್ಟ್ 21 ರಿಂದ 27ರ ವರೆಗೆ ಏಳು ದಿನ ಸಪ್ತ ರಾತ್ರೋತ್ಸವ (Saptha Rathotsava) ನಡೆಯಲಿದೆ ಹಾಗೂ ಆಗಸ್ಟ್‌ 22, 23, 24ರಂದು ರಾಯರ 350ನೇ ಆರಾಧನೆ ಮಹೋತ್ಸವ ನಡೆಯಲಿದೆ ಎಂದು ಮಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಹಿನ್ನೆಲೆ ವಿಶೇಷ ಪೂಜೆ ಮಹಾಭಿಷೇಕ ನಡೆಯಲಿದೆ. ಕೊರೊನಾ ಸಂಕಷ್ಟ ಗಮನದಲ್ಲಿಟುಕೊಂಡು ಅತ್ಯಂತ ಸರಳವಾಗಿ ಆರಾಧನ ಮಹೋತ್ಸವ ರೂಪಿಸಲಾಗಿದೆ ಎಂದು ಸುಭುದೇಂದ್ರ ತೀರ್ಥರು ಹೇಳಿದರು.
ಮಂತ್ರಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ರಾಘವೇಂದ್ರ ಸ್ವಾಮಿಗಳು ಸಶರೀರವಾಗಿ ವೃಂದಾವನಸ್ಥರಾದ ದಿನದ ಹಿನ್ನೆಲೆಯಲ್ಲಿ ಆರಾಧನಾ ಮಹೋತ್ಸವ ಆಚರಣೆ ಮಾಡಲಾಗುತ್ತದೆ. ಕೋವಿಡ್ ನಿಯಮಗಳನ್ನ ಪಾಲಿಸಿ ಆರಾಧನಾ ಮಹೋತ್ಸವ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ದುಂದುವೆಚ್ಚ ಹಾಗೂ ವಿಜೃಂಭಣೆಯಿಂದ ಮಾಡದೇ ಸಾಂಸ್ಕೃತಿಕವಾಗಿ ಆಚರಿಸಲಾಗುತ್ತದೆ. ಏಳು ದಿನಗಳ ಕಾಲ ಸಪ್ತರಾತ್ರೋತ್ಸವ ನಡೆಯಲಿದೆ. ಈ ಬಾರಿಯೂ ದೇಶದ ವಿವಿಧೆಡೆಯಿಂದ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ. ಸ್ಯಾನಿಟೈಸೇಷನ್, ಎಲೆಕ್ಟ್ರಾನಿಕ್ ಥರ್ಮಲ್ ಸ್ಕ್ರೀನಿಂಗ್ ಹಾಗೂ ಆಧುನಿಕ ಯಂತ್ರಗಳ ಅಳವಡಿಕೆ ಮಾಡಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗಿದ್ದು, ವೈದ್ಯರ ಸೇವೆಗೆ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು, ವಸತಿ, ಊಟ, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತಿರುಪತಿ ತಿರುಮಲ ದೇವಾಲಯದಿಂದ ಶೇಷ ವಸ್ತ್ರ ಬರಲಿದೆ. ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳು ಹೊರ ಪ್ರಾಂಗಣದಲ್ಲಿ ಏಳು ದಿನಗಳ ಕಾಲ ನಡೆಯಲಿವೆ ಎಂದು ತಿಳಿಸಿದರು.
ಜೊತೆಗೆ ಅಂಬುಲೆನ್ಸ್ ಸೇರಿ ತುರ್ತು ಸೇವೆಯ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರಿಮಳ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿದೆ. ವಯೋ ವೃದ್ಧರಿಗೆ ಶೀಘ್ರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದರು.
ಭಕ್ತರ ಕಾಣಿಕೆಯಿಂದ 14 ಕೆ.ಜಿ. ಚಿನ್ನದ ಪೂಜಾ ಪಾತ್ರೆಗಳ ತಯಾರಿಕೆ ನಡೆದಿದೆ. ಭವ್ಯವಾದ ಮ್ಯೂಸಿಯಂ ಸಿದ್ದಗೊಳಿಸಿದ್ದು ಆರಾಧನಾ ಕಾರ್ಯಕ್ರಮ ವೇಳೆ ಲೋಕಾರ್ಪಣೆಗೊಳ್ಳಲಿದೆ. ಮಿನಿ ವಿಮಾನ ನಿಲ್ದಾಣಕ್ಕೆ ನಿರ್ಮಾಣಕ್ಕೆ ದಾನಿಗಳು ಮುಂದೆ ಬಂದಿದ್ದು, ಮುಂದಿನ ದಿನಗಳಲ್ಲಿ ಆಗಲಿದೆ. ರಾಯಚೂರಿನಲ್ಲಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಯರ ಹೆಸರನ್ನು ಇಡುವುದು ಸೂಕ್ತ. ವಿಮಾನದಲ್ಲಿ ಬರುವ ಹೆಚ್ಚು ಪ್ರಯಾಣಿಕರು ರಾಯರ ಭಕ್ತರು ಆಗಿರುತ್ತಾರೆ. ಮಂತ್ರಾಲಯಕ್ಕೆ ಬರುವವರೇ ಹೆಚ್ಚು ಇರುತ್ತಾರೆ ಅಂತ ಸುಬುಧೇಂದ್ರತೀರ್ಥ ಸ್ವಾಮಿ ಹೇಳಿದರು.

ಪ್ರಮುಖ ಸುದ್ದಿ :-   ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement