ಯೋಗೀಶ್ ಗೌಡ ಹತ್ಯೆ ಪ್ರಕರಣ; ಮತ್ತೊಂದು ಕೇಸಿನಲ್ಲೂ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು

ಬೆಂಗಳೂರು: ಬಿಜೆಪಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿಯ ಅವರಿಗೆ ಆ.11ರಂದು ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಸಿಕ್ಕರೂ ಸಾಕ್ಷ್ಯನಾಶದ ಮತ್ತೊಂದು ಪ್ರಕರಣ ಕೋರ್ಟಿನಲ್ಲಿ ಇದ್ದುದರಿಂದ ಬಿಡುಗಡೆ ಭಾಗ್ಯವಿರಲಿಲ್ಲ. ಈಗ ಸಾಕ್ಷ್ಯನಾಶ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಇದೀಗ ವಿನಯ್ ಕುಲ್ಕರ್ಣಿಗೆ ಜಾಮೀನು ಮಂಜೂರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೆಷ ಕೋರ್ಟ್ ಜಾಮೀನು ನೀಡಿದೆ. ಹೀಗಾಗಿ ಅವರು ಶೀಘ್ರವೇ ಬಿಡುಗಡೆಯಾಗಲಿದ್ದಾರೆ.
ಆದರೆ ವಿನಯ್ ಕುಲಕರ್ಣಿ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಜಾಮೀನು ನೀಡುವಾಗ ಷರತ್ತು ಹಾಕಿದೆ. ಹೀಗಾಗಿ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ.
ಜಾಮೀನು ದೊರೆತ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶೀಘ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೈಲಿನಿಂದ ಬಿಡುಗಡೆಯಾದರೂ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್​ ಜಾಮೀನು ನೀಡುವಾಗ ಈ ಷರತ್ತು ವಿಧಿಸಿದೆ. ಯೋಗೇಶ್​ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದಲೂ ವಿನಯ್ ಕುಲಕರ್ಣಿಗೆ ಜಾಮೀನು ದೊರೆತಿದ್ದು, ಷರತ್ತುಬದ್ಧ ಬಿಡುಗಡೆಗೆ ಹಾದಿ ಮುಕ್ತವಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ 'ಸಿಮ್ ಬಾಕ್ಸ್' ಜಾಲ ಪತ್ತೆ ; ನಾಲ್ವರ ಬಂಧನ, 320 ಸಿಮ್‌ ಕನೆಕ್ಷನ್‌ ಸಾಮರ್ಥ್ಯದ 10 ಸಾಧನ ವಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement