ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ.
ಪುಲ್ವಾಮ ಜಿಲ್ಲೆಯ ಪಂಪೋರ್ ಪ್ರದೇಶದ ಖ್ರೆವ್ ನಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಪ್ರದೇಶ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ. ಈ ವೇಳೆ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿವೆ. ತಕ್ಷಣವೇ ಭದ್ರಾಪಡೆಗಳು ಪ್ರತಿಯಾಗಿ ಗುಂಡುಹಾರಿಸಿವೆ. ನಂತರ ನಡೆದ ಎನ್ ಕೌಂಟರ್ ನಲ್ಲಿ ಇದುವರೆಗೆ ಇಬ್ಬರು ಉಗ್ರಗಾಮಿಗಳು ಹತರಾದ ವರದಿಯಾಗಿದೆ. ಎನ್ ಕೌಂಟರ್ ಮುಂದುವರಿದಿದೆ.
ನಿಮ್ಮ ಕಾಮೆಂಟ್ ಬರೆಯಿರಿ