ಮೂರು ಮಕ್ಕಳ ನೀತಿಗೆ ಚೀನಾ ಸರ್ಕಾರದಿಂದ ಅನುಮೋದನೆ

ಬೀಜಿಂಗ್‌: ಜನನ ಪ್ರಮಾಣ ಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಜನಸಂಖ್ಯೆ ಮತ್ತು ಕುಟುಂಬ ಯೋಜನೆಯ ನೀತಿ ಪರಿಷ್ಕರಿಸಿದ ಚೀನಾ ಸರ್ಕಾರ ಶುಕ್ರವಾರ ‘ಮೂರು ಮಕ್ಕಳ ನೀತಿ’ಗೆ ಅನುಮೋದನೆ ನೀಡಿದೆ.
ದಂಪತಿಗೆ ಮೂರು ಮಕ್ಕಳನ್ನು ಹೊಂದಲು ಅನುವು ಮಾಡಿಕೊಡುವ ಪರಿಷ್ಕೃತ ‘ಜನಸಂಖ್ಯೆ ಮತ್ತು ಕುಟುಂಬ ಯೋಜನೆ ಕಾನೂನನ್ನು ರಾಷ್ಟ್ರೀಯ ಪೀಪಲ್ಸ್ ಕಾಂಗ್ರೆಸ್‌ನ (ಎನ್‌ಪಿಸಿ) ಸ್ಥಾಯಿ ಸಮಿತಿ ಅಂಗೀಕರಿಸಿದೆ.
‌ ಕುಟುಂಬ ಯೋಜನೆಯ ಕಾಯ್ದೆಗೆ ತಿದ್ದುಪಡಿ ತರುವ ಜೊತೆಗೆ, ಈ ಕಾನೂನಿನಲ್ಲಿ ಕುಟುಂಬಗಳಿಗೆ ಹೆಚ್ಚು ಸಾಮಾಜಿಕ ಮತ್ತು ಆರ್ಥಿಕ ಬೆಂಬಲ ನೀಡುವಂತಹ ಕ್ರಮಗಳಿಗೂ ಆದ್ಯತೆ ನೀಡಿದೆ.
ಈ ಹೊಸ ಕಾಯ್ದೆಯು ದೇಶದ ಬಂಡವಾಳ ಹೂಡಿಕೆ, ತೆರಿಗೆಗಳು, ವಿಮೆ, ಶಿಕ್ಷಣ, ವಸತಿ ಮತ್ತು ಉದ್ಯೋಗ ಕ್ಷೇತ್ರದ ಬೆಳವಣಿಗೆಗೆ ನೆರವಾಗುವ ಮೂಲಕ, ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುತ್ತದೆ. ಜೊತೆಗೆ, ಮಕ್ಕಳ ಶಿಕ್ಷಣದ ವೆಚ್ಚವನ್ನೂ ಕಡಿತಗೊಳಿಸಲಿದೆ ಎಂದು ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದೆ.
ಕಳೆದ ಮೇ ತಿಂಗಳಲ್ಲಿ ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷವು ಜನನದ ಮಿತಿಯನ್ನು ಸಡಿಲಗೊಳಿಸಲು ನಿರ್ಧರಿಸಿತ್ತು. ದಂಪತಿಗೆ ಇಬ್ಬರು ಮಕ್ಕಳ ಬದಲು ಮೂರು ಮಕ್ಕಳನ್ನು ಹೊಂದಲು ಅವಕಾಶ ಕಲ್ಪಿಸುವ ನೀತಿಗೆ ಅನುಮೋದನೆ ನೀಡಿತ್ತು.

ಪ್ರಮುಖ ಸುದ್ದಿ :-   ಅಪರೂಪದ ಮದುವೆ; 2ನೇ ವಿಶ್ವ ಮಹಾಯುದ್ಧದ ಸೇನಾನಿ, 100 ವರ್ಷದ ವ್ಯಕ್ತಿಯೇ ಮದುವೆ ಗಂಡು ....ವಧುವಿಗೆ 96 ವರ್ಷ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement