ಮೋಹರಂ ಆಚರಣೆ ವೇಳೆ ವಿದ್ಯುತ್ ಅವಘಡ:ಇಬ್ಬರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಮೊಹರಂ ಹಬ್ಬ ಆಚರಣೆ ವೇಳೆ ವಿದ್ಯುತ್ ಅವಘಡ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ.
ಮೃತರನ್ನು ಹಸನ್ ಸಾಬ್ ಮುಲ್ಲಾ (55) ಹಾಗೂ ಹುಲಿಗೆಮ್ಮ (25) ಎಂದು ಗುರುತಿಸಲಾಗಿದೆ. ಮೋಹರಂ ಆಚರಣೆಯ ಸಂದರ್ಭದಲ್ಲಿ ದೇವರನ್ನ ಭೇಟಿಗೆ ಕರೆದೊಯ್ಯುವ ಸಂದರ್ಭದಲ್ಲಿ ವಿದ್ಯುತ್ ತಂತಿ ದೇವರ ಪಂಜಾಕ್ಕೆ ತಗುಲಿದ ಪರಿಣಾಮ ವಿದ್ಯುತ್‌ ಪ್ರವಹಿಸಿ ಇಬ್ಬರು ಮೃತಪಟ್ಟಿದ್ದಾರೆ.
ದೇವರನ್ನು ಹಿಡಿದ ವ್ಯಕ್ತಿ ಮತ್ತು ದರ್ಶನಕ್ಕೆ ಬಂದಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು ಮೊಹರಂ ಕತ್ತಲರಾತ್ರಿ ನಿಮಿತ್ತ ಸಂತೆಕೆಲ್ಲೂರಿನಿಂದ ದಾದನದೊಡ್ಡಿಗೆ ದೇವರುಗಳು ಭೇಟಿ ನೀಡುವಾಗ ಈ ವಿದ್ಯುತ್ ಅವಘಡ ಸಂಭವಿಸಿದೆ
ಗ್ರಾಮದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿ ಮೋಹರಂ ಆಚರಣೆಯನ್ನು ನಡೆಸಲಾಗಿದೆ ಎನ್ನಲಾಗಿದೆ.
ಹುಸೇನ್ ಪಾಶಾ ದೇವರನ್ನ ದಾದನ್ ದೊಡ್ಡಿ ದರ್ಗಾಕ್ಕೆ ಕರೆದೊಯ್ಯುವ ವೇಳೆ ದೇವರು ವಿದ್ಯುತ್ ತಂತಿಗೆ ತಾಗಿ ದುರ್ಘಟನೆಯಾಗಿದೆ. ಕೋವಿಡ್ ಹಿನ್ನೆಲೆ ನಿಷೇಧದ ನಡುವೆಯೂ ಮೊಹರಂ ಆಚರಣೆಗೆ ಗ್ರಾಮಸ್ಥರು ಮುಂದಾಗಿದ್ದರು. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement