ಇಡಿ ಸಮನ್ಸ್, ದೆಹಲಿಗೆ ತೆರಳಿದ ಮಾಜಿ ಸಚಿವ ಜಮೀರ್ ಅಹಮ್ಮದ್‌

ಬೆಂಗಳೂರು:ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಮಾಜಿ ಸಚಿವ ಇಂದು (ಶನಿವಾರ) ಬೆಳಿಗ್ಗೆ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ದೆಹಲಿಗೆ ಹೊರಟಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿರುವ ಜಮೀರ್ ಸಂಜೆ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.
ನಿನ್ನೆ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದ ಅವರು, ಇಂದು ಬೆಳಗ್ಗೆ ದೆಹಲಿಗೆ ಭೇಟಿ ನೀಡಿದ್ದಾರೆ. ಜಮೀರ್‌ ಅಹಮ್ಮದ್‌ ಅವರಿಗೆ ಇಡಿಯಿಂದ ನಿನ್ನೆ ಸಂಜೆ ಸಮನ್ಸ್ ತಲುಪಿತ್ತು ಎಂದು ಹೇಳಲಾಗಿದೆ.
ಇದೇ ವೇಳೆ ಜಮೀರ್ ಅವರು ಸಾಮಾಜಿಕ ಜಾಲತಾಣದಲ್ಲಿ ಇಡಿ ದಾಳಿಯ ಬಗ್ಗೆ ಮತ್ತೆ ಪ್ರತಿಕ್ರಿಯಿಸಿದ್ದು, ದೇಶದ ಒಬ್ಬ ಪ್ರಬಲ ಮುಸ್ಲಿಂ ನಾಯಕನನ್ನು ಟಾರ್ಗೆಟ್ ಮಾಡಲಾಗಿದೆ. ನಾನು ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧವಾ ಎಂದು ಪ್ರಶ್ನಿಸಿದ್ದಾರೆ. ನಾನು ರಾಜಕೀಯ ಜೀವನದಲ್ಲಿರುವವರೆಗೂ ನನ್ನ ಜನ ತಲೆತಗ್ಗಿಸುವಂತ ಯಾವ ಕೆಲಸವನ್ನೂ ಮಾಡುವುದಿಲ್ಲ. ನಾನು ಯಾವುದುಕ್ಕೂ ಹೆದರಿವುದಿಲ್ಲ. ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement