ಗೋಕರ್ಣ: ಓಂ ಬೀಚ್‍ನಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಮುದ್ರದಲ್ಲಿ ಕೊಚ್ಚಿ ಹೋದ ವ್ಯಕ್ತಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ  ಗೋಕರ್ಣ ಓಂ ಬೀಚಿನಲ್ಲಿ ಸೆಲ್ಫಿ ಹುಚ್ಚಿಗೆ ವ್ಯಕ್ತಿಯೊಬ್ಬ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾನೆ.

ಕಲ್ಲು ಬಂಡೆಯ ಮುಂದೆ ಸೆಲ್ಫಿ ತೆಗಿಯಲು ಹೋದ  ಕಾಲುಜಾರಿ ಬಿದ್ದ ಯುವಕ ಅಲೆಗಳ ಹೊಡೆತಕ್ಕೆ ಸಿಕ್ಕಿ  ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್‍ನಲ್ಲಿ ಇಂದು (ಶನಿವಾರ) ಮಧ್ಯಾಹ್ನ ನಡೆದಿದೆ.
ಹಾನಗಲ್ ಮೂಲದ ಕುಮಾರ ಶೇಕಪ್ಪ ಕಮಾಟಿ (35) ಸಮುದ್ರಪಾಲಾದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಹಾನಗಲ್ ನಿಂದ ಅವರು ಗೋಕರ್ಣಕ್ಕೆ 12 ಜನರೊಂದಿಗೆ ಆಗಮಿಸಿದ್ದರು. ಓಂ ಬೀಚಿನ ಸಮುದ್ರ ತೀರದ ಕಲ್ಲುಬಂಡೆ ಬಳಿ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದರು. ಓಂ ಬೀಚ್ ನಲ್ಲಿ ಸೆಲ್ಫಿಗಾಗಿ ಕಲ್ಲಿನ ಮೇಲೆ ನಿಂತಿದ್ದ ಕುಮಾರ್, ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದಂತೆ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ತಕ್ಷಣ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆಗೆ ಧಾವಿಸಿದ್ದಾರೆ ಆದರೆ ಅಲೆಗಳ ಅಬ್ಬರಕ್ಕೆ ಸಿಲುಕಿರುವ ವ್ಯಕ್ತಿ ಸಮುದ್ರದಲ್ಲಿ ಕಣ್ಮರೆಯಾಗಿದ್ದಾರೆ.
ಇವರನ್ನು ಲೈಫ್ ಗಾರ್ಡಗಳು ರಕ್ಷಿಸುವ ಪ್ರಯತ್ನ ಮಾಡಿದರಾದರೂ ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ. ಪೊಲೀಸರಿಂದ ಶೋಧ ಕಾರ್ಯ ನಡೆಯುತಿದ್ದು , ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement