ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಆಗಸ್ಟ್​ 24ರ ವರೆಗೂ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 9 ಜಿಲ್ಲೆಗಳಲ್ಲಿ ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್​ 23 ಮತ್ತು 24ರಂದು ಮುಖ್ಯವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಶಿವಮೊಗ್ಗ, ಕೊಡಗು,ಚಿಕ್ಕಮಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಆಗಸ್ಟ್​ 24ರ ವರೆಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ. ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಇನ್ನೂ 3 ದಿನ ಇರಲಿದೆ.ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಅಲ್ಲದೆ,ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ನಾಳೆಯಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement