ಗ್ಯಾಸ್ ಬಲೂನ್ ಸಿಲಿಂಡರ್ ಸ್ಫೋಟ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ಸಾವು, 10 ಜನರಿಗೆ ಗಾಯ

ಲಕ್ನೋ: ಗ್ಯಾಸ್ ಬಲೂನ್ ಸಿಲಿಂಡರ್ ಸ್ಫೋಟಗೊಂಡು ಬಲೂನ್ ಮಾರಾಟಗಾರ ಸೇರಿದಂತೆ ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ವಾರಾಣಸಿ ಹಾಗೂ ಮಧ್ಯಪ್ರದೇಶದ ಚಿಂದ್ವಾರದಲ್ಲಿ ಭಾನುವಾರ ನಡೆದಿದೆ.
ಅಲ್ಲದೆ ಈ ಘಟನೆಯಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಚಿಂದ್ವಾರಾ ಮತ್ತು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಭಾನುವಾರ ನಡೆದಿದೆ.
ಚಿಂದ್ವಾರಾ ಮಾರುಕಟ್ಟೆಯಲ್ಲಿ ಮೃತಪಟ್ಟವರನ್ನು ತಾಜುದ್ದೀನ್ ಅನ್ಸಾರಿ ನಿಜಾಮುದ್ದೀನ್ ಅನ್ಸಾರಿ(40) ಮತ್ತು ಶೇಖ್ ಇಸ್ಮಾಯಿಲ್(70) ಎಂದು ಗುರುತಿಸಲಾಗಿದೆ. ವಾರಾಣಾಸಿಯ ರಾಮನಗರ ಪ್ರದೇಶದಲ್ಲಿ ಮೃತಪಟ್ಟವರನ್ನು ಗೀತಾ ದೇವಿ(40) ಮತ್ತು ಲಲ್ಲಾ(30) ಎಂದು ಗುರುತಿಸಲಾಗಿದೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಂದ್ವಾರ ಮಾರುಕಟ್ಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಶಬ್ದ ಬಹಳ ಜೋರಾಗಿತ್ತು. ಬಲೂನ್ ಮಾರಾಟಗಾರ ಬಲೂನ್‍ಗೆ ಗ್ಯಾಸ್ ತುಂಬಿಸುವ ವೇಳೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮತ್ತೊಂದೆಡೆ ವಾರಣಾಸಿ ಪೊಲೀಸರು ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement