ಬೆಂಗಳೂರು ಆಹಾರ ಉತ್ಪಾದನೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರ ಸಾವು, ಹಲವರಿಗೆ ಗಾಯ

ಬೆಂಗಳೂರು: ಬೆಂಗಳೂರು: ಬೆಂಗಳೂರಿನ ಆಹಾರ ಉತ್ಪಾದನೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಘಟನೆ ಸೋಮವಾರ ನಡೆದ ವರದಿಯಾಗಿದೆ.
ನಗರದ ಮಾಗಡಿ ರಸ್ತೆಯ 5ನೇ ಕ್ರಾಸ್ ನಲ್ಲಿ ಇರುವ ಎಂ ಎಂ ಫುಡ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿರುವ ಘಟನೆಯಲ್ಲಿ ಸಜೀವವಾಗಿ ದಹನಗೊಂಡವರನ್ನು ಬಿಹಾರ ಮೂಲದ ಮನೀಷ ಮತ್ತು ಸೌರಭ್ ಎಂದು ಗುರುತಿಸಲಾಗಿದೆ. ಇತರ ಮೂವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಯ್ಲರ್ ಸ್ಫೋಟದ ಸಂದರ್ಭ ಕಾರ್ಖಾನೆಯಲ್ಲಿ 7 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಸ್ಫೋಟದಿಂದ ಅಕ್ಕಪಕ್ಕದ ಮನೆಗೂ ಹಾನಿಯಾಗಿದೆ. ಫುಡ್ ಫ್ಯಾಕ್ಟರಿ ಅಕ್ಕಪಕ್ಕದ ಮನೆಯ ಶಾಂತಿ ಮತ್ತು ಧನಲಕ್ಷಿ ಎಂಬುವವರಿಗೂ ಸುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ವಿಕ್ಚೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಸಚಿನ್ ಎಂಬವರು ಇದೇ ಫುಡ್ ಫ್ಯಾಕ್ಟರಿಯ ಮಾಲೀಕರೊಂದಿಗೆ ಪಾರ್ಟನರ್ ಆಗಿದ್ದರು ಎಂದು ತಿಳಿದು ಬಂದಿದೆ.
ಸ್ಫೋಟದ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement