ನಾಳೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಬುಧವಾರ) ದೆಹಲಿಗೆ ತೆರಳಲಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನಾಳೆ ಸಂಜೆ ದೆಹಲಿಗೆ ತೆರಳಿ ಹಲವು ನಾಯಕರ ಭೇಟಿಯಾಗಿ, ಉಳಿದಿರುವ ನಾಲ್ಕು ಸಚಿವ ಸ್ಥಾನಗಳ ವಿಚಾರವಾಗಿ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರದ ಆರೋಗ್ಯ ಸಚಿವರು, ವಿತ್ತ ಸಚಿವರು, ಜಲಶಕ್ತಿ ಸಚಿವರು ಮತ್ತು ಕೃಷಿ ಸಚಿವರನ್ನು ಭೇಟಿಯಾಗುತ್ತೇನೆ. ರಕ್ಷಣಾ ಇಲಾಖೆ ಸಚಿವರ ಭೇಟಿಗೂ ಸಮಯ ಕೇಳಿದ್ದೇನೆ ಎಂದು ತಿಳಿಸಿದರು.
ನಮ್ಮ ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ವಕೀಲರೊಂದಿಗೆ ಭೇಟಿ ಮಾಡಿ ಸಭೆ ನಡೆಸುತ್ತೇವೆ. ಜಲ ವಿವಾದಗಳ ಬಗ್ಗೆ ಎಜಿ ಸೇರಿದಂತೆ ಸಚಿವರ ಜೊತೆ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ಆಗಸ್ಟ್ 26ರಂದು ಸಭೆ ಸೇರಿ ಚರ್ಚೆ ನಡೆಸುತ್ತೇನೆ ಎಂದು ಅವರು ಹೇಳಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement