ಕರ್ನಾಟಕದ 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಂಜೆ ಕಾಲೇಜು ಪ್ರಾರಂಭಕ್ಕೆ ಅನುಮೋದನೆ

ಬೆಂಗಳೂರು: ರಾಜ್ಯದ 11 ಮಹಾನಗರ ಪಾಲಿಕೆ ವ್ಯಾಪ್ತಿಯ 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಂಜೆ ಕಾಲೇಜುಗಳನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿದೆ.
11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಮೂಲಸೌಕರ್ಯ ಬಳಸಿಕೊಂಡು ವಿದ್ಯಾರ್ಥಿಗಳು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಹಾಗೂ ಉತ್ತಮ ಉದ್ಯೋಗ ಅವಕಾಶಗಳಿಗೆ ಎಡೆ ಮಾಡಿಕೊಡುವ ಬಿಕಾಂ ಮತ್ತು ಬಿಸಿಎ ಕೋರ್ಸ್‍ಗಳನ್ನು ಪ್ರಾರಂಭಿಸಲು ಉನ್ನತ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.
ಸಂಧ್ಯಾ ಶಕ್ತಿ ಯೋಜನೆಯಡಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಂಜೆ ಕಾಲೇಜುಗಳನ್ನು ಪ್ರಾರಂಭಿಸಬಹುದಾಗಿದೆ. ಸಂಜೆ ಕಾಲೇಜುಗಳಿಗೆ ಅಗತ್ಯವಿರುವ ಹುದ್ದೆಗಳ ಸೃಜನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಬೇಕು ಹಾಗೂ ಇದಕ್ಕಾಗಿ ತಗಲುವ ವೆಚ್ಚವನ್ನು ಇಲಾಖೆಗೆ ಒದಗಿಸಿರುವ ಅನುದಾನದಲ್ಲಿ ಭರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಬೆಂಗಳೂರಿನ ಆರ್‌ ಸಿ ಕಾಲೇಜು, ಬೆಳಗಾವಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ತುಮಕೂರಿನ ಬಿಎಚ್ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆಯ ಎಂಸಿಸಿ ಬ್ಲಾಕ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರಿನ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಧಾರವಾಡದ ಕುಮಾರೇಶ್ವರನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರದ ನವಭಾಗ್ ಕಾಜಾ ಕಾಲೋನಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಲಬುರಗಿಯ ಸೇಡಂ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಳ್ಳಾರಿಯ ಸರಳಾದೇವಿ ಶತೀಶ್‍ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಂಜೆ ಕಾಲೇಜುಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement