ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ ಮುಂದುವರೆಯಲಿದೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಮತ್ತೆ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ. ಆಗಸ್ಟ್​ 27ವರೆಗೆ ಕರ್ನಾಟಕದಲ್ಲಿ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ. ರಾಜ್ಯದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement