ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್; ಪೊಲೀಸರು ಹೇಳಿದ್ದೇನು..?

ಮೈಸೂರು: ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಉತ್ತರ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿಯನ್ನು ನಗರದ ಹೊರವಲಯದಲ್ಲಿ ಅಪರಿಚಿತರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ (Gang Rape) ಘಟನೆ ಮೈಸೂರನ್ನು ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಕುಳಿತಿದ್ದ ವಿದ್ಯಾರ್ಥಿಯನ್ನು ಎಣ್ಣೆ ಪಾರ್ಟಿ ಮಾಡುತ್ತಿದ್ದ ಪುಂಡರಗುಂಪು ನಿರ್ಜನ ಪ್ರದೇಶಕ್ಕೆ ಅತ್ಯಾಚಾರ ಎಸಗಿದೆ.
ಇಡೀ ಘಟನೆಯಿಂದ ಸಾಂಸ್ಕೃತಿಕ ನಗರಿಯ ಮರ್ಯಾದೆ ದೇಶಾದ್ಯಂತ ಹರಾಜಾಗಿದೆ. ನಿನ್ನೆ ಸಂಜೆ (ಮಂಗಳವಾರ) ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಈ ಘಟನೆ ನಡೆದಿದೆ. ನಿನ್ನೆ ವಿದ್ಯಾರ್ಥಿನಿ ಹಾಗೂ ಆತನ ಸ್ನೇಹಿತ ಇಬ್ಬರು ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಲೇಔಟ್ ಗೆ ಬಂದಿದ್ದಾರೆ. ಇಬ್ಬರು ಮಾತನಾಡುತ್ತಿದ್ದ ವೇಳೆ ಎಣ್ಣೆ ಪಾರ್ಟಿ ಮಾಡುತ್ತ ಕುಳಿತಿದ್ದ ಐವರ ಗ್ಯಾಂಗ್ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಎಸಗಿದೆ.
ಗ್ಯಾಂಗ್ ಆರಂಭದಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿತು, ಆದರೆ ಏನೂ ಸಿಗದಿದ್ದಾಗ, ಆಕೆಯ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಮತ್ತು ಅವರು ವಿದ್ಯಾರ್ಥಿನಿಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆಗಾಗಿ ಹಲವು ತಂಡಗಳನ್ನು ರಚಿಸಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಸ್ನೇಹಿತನಿಗೆ ಥಳಿಸಿದ ಕಾಮುಕರು…:
ಈ ವೇಳೆ ವಿರೋಧ ವ್ಯಕ್ತಪಡಿಸಿದ್ದ ವಿದ್ಯಾರ್ಥಿನಿಯ ಸ್ನೇಹಿತನ ಮೇಲೆ ಪುಂಡರು ಹಲ್ಲೆ ಮಾಡಿದ್ದಾರೆ. ಮೊದಲು ಕಪಾಳಕ್ಕೆ ಹೊಡೆದು ಕಲ್ಲಿನಿಂದ ತಲೆಗೆ ಜಜ್ಜಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತ ಕುಸಿದು ಬಿದ್ದ ಬಳಿಕ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಐದು ಮಂದಿ ಬಲಾತ್ಕಾರ ಮಾಡಿದ್ದಾರೆ. ನಿರ್ಜನ ಪ್ರದೇಶದಲ್ಲಿ ನಡೆದ ಘಟನೆಯನ್ನು ವಿದ್ಯಾರ್ಥಿನಿ‌ ಸ್ನೇಹಿತ ಪೊಲೀಸರಿಗೆ ಮುಟ್ಟಿಸಿದ್ದಾನೆ. ಬಳಿಕ ಅಸ್ವಸ್ಥಳಾಗಿದ್ದ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಾಯಗೊಂಡ ಸಂತ್ರಸ್ತೆ ಹಾಗೂ ಸ್ನೇಹಿತನ ಹೇಳಿಕೆಯನ್ನ ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಎಸಿಪಿ ಶಶಿಧರ್ ಹಾಗೂ ಆಲನಹಳ್ಳಿ ಠಾಣಾ ಇನ್ಸ್‌ಪೆಕ್ಟರ್ ರವಿಶಂಕರ್ ಸಿಬ್ಬಂದಿಯೊಂದಿಗೆ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.
ಘಟನೆಗೆ ಪ್ರತಿಕ್ರಿಯಿಸಿದ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಪ್ಪಿತಸ್ಥರನ್ನು ಹಿಡಿಯಲು ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ನಿರ್ದೇಶನ ನೀಡಿದ್ದಾರೆ.
ಹೇಳಿಕೆಯನ್ನು ಆಧರಿಸಿ, ಪ್ರಕರಣವನ್ನು ದಾಖಲಿಸಲಾಗಿದೆ. ಅದನ್ನು ಯಾರು ಮಾಡಿದರೂ ಅವರನ್ನು ಗುರುತಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾನು ಡಿಜಿಪಿಗೆ ನಿರ್ದೇಶನ ನೀಡಿದ್ದೇನೆ” ಎಂದು ಬೊಮ್ಮಾಯಿ ಹೇಳಿದ್ದಾರೆ.
ಗ್ಯಾಂಗ್ ರೇಪ್ ಪ್ರಕರಣದ ತನಿಖೆಗೆ ಎಡಿಜಿಪಿ ಪ್ರತಾಪ್ ರೆಡ್ಡಿ‌ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಲಾಗಿದ್ದು, ಅತಿ ಶೀಘ್ರದಲ್ಲಿ ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯುವತಿಯ ಜೊತೆ ಇದ್ದ ಯುವಕನ ಮಾಹಿತಿ ಆಧರಿಸಿ ಪೊಲೀಸರು ಎಫ್.ಐ.ಆರ್ ದಾಖಲು ಮಾಡಿಕೊಂಡಿದ್ದಾರೆ. ಘಟನೆಯ ಎಲ್ಲ‌ ವಿವರಗಳನ್ನು ಮುಖ್ಯಮಂತ್ರಿ ಹಾಗೂ ಗೃಹಸಚಿವರಿಗೆ ಹೇಳಿದ್ದೇನೆ. ಮಾಧ್ಯಮದ ಮುಂದೆ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ಯುವತಿ ಆಸ್ಪತ್ರೆಯಲ್ಲಿ ಇದ್ದಾಳೆ. ಆಕೆ ಆರೋಗ್ಯವಾಗಿದ್ದಾಳೆ. ಮೈಸೂರಿಗೆ ಕಪ್ಪು ಚುಕ್ಕೆ ತರುವಂತಹ ಘಟನೆ ಮತ್ತೆ ನಡೆಯದಂತೆ ತಡೆಯಲು ಸೂಕ್ತ ಭದ್ರತೆ ವ್ಯವಸ್ಥೆ ಮಾಡುತ್ತೇವೆ ಎಂದು ಮೈಸೂರಿನಲ್ಲಿ ಜಿಲ್ಲ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಪ್ರಕರಣವನ್ನ ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನ ಶೀಘ್ರದಲ್ಲೇ ಬಂಧಿಸುತ್ತೇವೆ. ಘಟನೆ ಬಗ್ಗೆ ಕೆಲ ಮಾಹಿತಿಯನ್ನ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಘಟನೆ ನಡೆದಿದೆ, ತನಿಖೆಯನ್ನ ಆರಂಭಿಸಿದ್ದೇವೆ. ಹಾಗೂ ಯುವತಿ ಜೊತೆಗಿದ್ದ ಯುವಕನಿಂದಲೂ ಮಾಹಿತಿ ಪಡೆದಿದ್ದೇವೆ. ಸೂಕ್ಷ್ಮ ವಿಚಾರವಾದ ಕಾರಣ ಎಲ್ಲವನ್ನೂ ಬಹಿರಂಗಪಡಿಸಲು ಆಗುವುದಿಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement