ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಮೈಸೂರು: ಮೈಸೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ.
ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ ವೇಳೆ ಐದಾರು ಮಂದಿ ಯುವಕರ ತಂಡ ಆಕೆಯ ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ.
6 ಮಂದಿ ದುಷ್ಕರ್ಮಿಗಳು ಯುವಕನ ಮೇಲೆ ಹಲ್ಲೆ ನಡೆಸಿ, ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ವರದಿಯಾಗಿದೆ. ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್​ ದಾಖಲು ಮಾಡಲಾಗಿದೆ. 4 ರಿಂದ 5 ಜನರಿಂದ ಗ್ಯಾಂಗ್​ರೇಪ್​ ನಡೆದಿದೆ ಎಂದು ಉಲ್ಲೇಖಿಸಿ ಎಫ್​ಐಆರ್ ದಾಖಲಾಗಿದೆ.
ಇದೀಗ ಆರೋಪಿಗಳ ಪತ್ತೆಗೆ ಮೈಸೂರು ಪೊಲೀಸರು ಬಲೆ ಬೀಸಿದ್ದಾರೆ. ಸಂತ್ರಸ್ತೆ ಸ್ನೇಹಿತನಿಂದ ಮಾಹಿತಿ ಪಡೆಯುತ್ತಿದ್ದಾರೆ. ಅತ್ಯಾಚಾರ ಎಸಗಿದವರು ಪರಿಚಯಸ್ಥರೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಸ್ಥಳಕ್ಕೆ ಭೇಟಿ‌ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಿರ್ಜನ‌ ಪ್ರದೇಶವಾಗಿರುವ ಘಟನಾ ಸ್ಥಳದಲ್ಲಿ ಪಾನಮತ್ತರಾಗಿ ಬಂದು ಅತ್ಯಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement