ಸಿದ್ದಾಪುರ : ಸೋದರ ಸಂಬಂಧಿಯಿಂದಲೇ 11 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ.
ಈ ಘಟನೆ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ೧೧ ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಸೋದರ ಸಂಬಂಧಿಯೋರ್ವ ಅ.೨೫ರ ಸಂಜೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸಿದ್ದಾಪುರ ತಾಲೂಕಿನ ಆಡುಕಟ್ಟಾ ಸಮೀಪದ ಹೆಗ್ಗೆಕೊಪ್ಪದ ಕಮಲಾಕರ (೨೭) ಎನ್ನುವಾತ ಬಂಧಿತ ಆರೋಪಿಯಾಗಿದ್ದಾನೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.


ನಿಮ್ಮ ಕಾಮೆಂಟ್ ಬರೆಯಿರಿ