ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 1,301 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶುಕ್ರವಾರ (ಆಗಸ್ಟ್ 27) ಹೊಸದಾಗಿ 1,301 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.ಇದೇ ಸಮಯದಲ್ಲಿ 17 ಕೊರೊನಾ ಸೋಂಕಿತರ ಸಾವು ಸಂಭವಿಸಿದೆ.ಇದೇ ಸಮಸದಲ್ಲಿ 1614 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,44,764 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,88,520 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,248 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 18,970 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 386 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,36,615 ಕ್ಕೆ ಏರಿಕೆಯಾಗಿದೆ. 12,13,296 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,977 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,341 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಬೆಂಗಳೂರು ನಗರ 386, ದಕ್ಷಿಣ ಕನ್ನಡ 248, ಹಾಸನ 117, ಮೈಸೂರು 72, ಶಿವಮೊಗ್ಗ 62, ಉಡುಪಿ 106, ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಜಿಲ್ಲವಾರು ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement