ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಆ. 28ರಿಂದ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಕರಾವಳಿ ಹಾಗೂ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ.
ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ ಇಂದು (ಶುಕ್ರವಾರ) ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲೂ ಮಳೆ ಮುಂದುವರೆಯಲಿದೆ.
ಇಂದು (ಶುಕ್ರವಾರ) ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ