ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ದೂರು ದಾಖಲು, ನಾಲ್ವರ ಬಂಧನ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಮನೆಯವರು ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ ಠಾಣೆಯ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಜುಲೈ 12 ರಂದು ಈ ಹೀನ ನಡೆದಿದೆ ಎಂದು ಹೇಳಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದ್ದು, ಆತನ ಶೋಧ ಕಾರ್ಯಾಚರಣೆ ನಡೆಸಲಾಗಿದೆ.
ಯಾರಿಗಾದರು ಹೇಳಿದರೆ ಬಿಡುವುದಿಲ್ಲ ಎಂದು ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಬಾಲಕಿ ಅಂಜಿ ಈ ವಿಚಾರ ಮನೆಯವರಲ್ಲಿ ತಿಳಿಸಲಿಲ್ಲ. ದಿನ ಕಳೆದಂತೆ ಬಾಲಕಿ ಮಾನಸಿಕವಾಗಿ ಕುಂದುತ್ತಿರುವುದನ್ನು ಗಮನಿಸಿದ ಮನೆಯವರು ಸೂಕ್ಷ್ಮವಾಗಿ ವಿಚಾರಿಸಿದಾಗ ಈ ಹೀನ ಕೃತ್ಯ ನಡೆದಿರುವುದು ತಿಳಿದಿದು ಬೆಳಕಿಗೆ ಬಂದಿದೆ. ವಿಚಾರ ಗೊತ್ತಾದ ಬಳಿಕ ಮನೆಯವರು ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement