ಮೈಸೂರು ಗ್ಯಾಂಗ್‌ರೇಪ್ ಪ್ರಕರಣ: ಐವರು ಆರೋಪಿಗಳು ಪೊಲೀಸರ ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ಐವರು ಆರೋಪಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೊರ ರಾಜ್ಯದಲ್ಲಿ ಪ್ರಕರಣದ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಆಗಸ್ಟ್​ 24ರಂದು ವಿದ್ಯಾರ್ಥಿನಿ ಮೇಲೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಗ್ಯಾಂಗ್‌ರೇಪ್ ನಡೆದಿತ್ತು. ಘಟನೆ ನಡೆದು 85 ಗಂಟೆಗಳ ಬಳಿಕ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಸ್ಟ್​ 24 ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು 6 ಆರೋಪಿಗಳ ಪೈಕಿ 5 ಮಂದಿಯನ್ನು ತಮಿಳುನಾಡಲ್ಲಿ ವಶಕ್ಕೆ ತೆಗೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ವಿದ್ಯಾರ್ಥಿಗಳ ತಂಡ ಈ ಕುಕೃತ್ಯ ನಡೆಸಿರಬಹುದು ಎನ್ನಲಾಗಿತ್ತು. ಆದರೆ ಬಂಧಿತ ಐವರ ಪೈಕಿ ಯಾರೂ ವಿದ್ಯಾರ್ಥಿಗಳಲ್ಲ ಎಂದು ಹೇಳಲಾಗಿದೆ.
ಇವರು ಈ ಹಿಂದೆ ಇಂಥದ್ದೇ ಕೃತ್ಯದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಈ ಮಧ್ಯೆ, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ. ಈ ಕುರಿತು ಒಂದೆರಡು ಗಂಟೆಗಳಲ್ಲಿ ಪೊಲೀಸರು ಮಾಹಿತಿ ನೀಡಲಿದ್ದಾರೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

80 ಮಂದಿ ಪೊಲೀಸರ 5 ತಂಡ ಆರೋಪಿಗಳಿಗಾಗಿ ಶೋಧ ನಡೆಸಿತ್ತು. ಹೊರ ರಾಜ್ಯದಲ್ಲಿ ಆರೋಪಿಗಳು ತಲೆಮರೆಸಿಕೊಡಿದ್ದರು. ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕವೇ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಘಟನೆಯ ನಂತರ ಆರೋಪಿಗಳು ಮೈಸೂರಿನಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದರು. ಇಂದು ಬೆಳಗ್ಗೆ ನಾಲ್ವರನ್ನೂ ಹೊರ ರಾಜ್ಯದಲ್ಲಿ ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಕೃತ್ಯ ನಡೆಸಿದ ಕಾಮುಕರೆಲ್ಲರೂ ಪೊಲೀಸರ ವಶವಾಗಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.
ಆದರೆ ಈ ಬಗ್ಗೆ ಈಗಲೇ ಯಾವುದೇ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ಮಾಹಿತಿ ನೀಡುತ್ತೇವೆ ಎಂದಷ್ಟೆ ತಿಳಿಸಿದರು.
ಆಗಸ್ಟ್ 24ರ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೋರಿ ಮೇಲೆ ಕುಳಿತಿದ್ದಳು. ಈ ವೇಳೆ ಪಾನಮತ್ತ ಯುವಕರ ತಂಡವೊಂದು ಅಲ್ಲಿಗೆ ಬಂದು ಯುವಕನ ಮೇಲೆ ಹಲ್ಲೆ ಮಾಡಿ ವಿದ್ಯಾರ್ಥಿನಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement