ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಪತ್ತೆಗೆ ಸಹಾಯ ಮಾಡಿದ ಬಸ್‌ ಟಿಕೆಟ್..!

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಎಲ್ಲರೂ ತಮಿಳುನಾಡು ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಘಟನೆ ನಡೆದು 85 ಗಂಟೆಗಳ ಬಳಿಕ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ತಮಿಳುನಾಡಿನ ಸತ್ಯಮಂಗಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆಹಚ್ಚುವಲ್ಲಿ ಪೊಲೀಸರಿಗೆ ದೊಡ್ಡ ಸಹಾಯ ನೀಡುದ್ದು ಬಸ್ ಟಿಕೆಟ್ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಗ್ಯಾಂಗ್ ರೇಪ್ ನಡೆದಿದ್ದ ಸ್ಥಳದಲ್ಲಿ ಸಿಕ್ಕಿದ್ದ ಬಸ್ ಟಿಕೆಟ್ ಆರೋಪಿಗಳ ಪತ್ತೆ ಜಾಡು ಹಿಡಿಯಲು ಸಹಾಯ ಮಾಡಿತ್ತು.

ಆರೋಪಿಗಳು ಘಟನೆ ನಡೆದ ನಂತರದ ಗೂಡ್ಸ್‌ ವಾಹನದ ಮೂಲಕ ಮೈಸೂರಿನಿಂದ ತಾಳವಾಡಿಗೆ ತೆರಳಿದ್ದರು. ಆದರೆ ಆರೋಪಿಗಳು ದರೋಡೆ ಮಾಡುವ ಹುನ್ನಾರ ನಡೆಸಿರುವುದು ಯುವಕನ ಹೇಳಿಕೆಯಿಂದ ಖಚಿತವಾಗಿತ್ತು. ಸ್ಥಳದಲ್ಲಿ ಸಿಕ್ಕಿರುವ ಮದ್ಯದ ಬಾಟಲಿಯ ಬಾರ್‌ ಕೋಡ್‌ ಮೂಲಕ ಖರೀದಿ ಮಾಡಿದ ಸ್ಥಳವನ್ನು ಪೊಲೀಸರನ್ನು ಪತ್ತೆ ಹಚ್ಚಿದ್ದರು. ಸ್ಥಳದಲ್ಲಿ ಸಿಕ್ಕಿದ್ದ ಬಸ್‌ ಟಿಕೆಟ್‌ ತಾಳವಾಡಿ ಸ್ಥಳದ ಮಾಹಿತಿ ನೀಡಿತ್ತು. ಆರೋಪಿಗಳು ತಾಳವಾಡಿಯಲ್ಲಿ ಮೊಬೈಲ್‌ ಸ್ವಿಚ್‌ ಆನ್‌ ಮಾಡುವುದನ್ನೇ ಕಾಯುತ್ತಿದ್ದ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿಗಳು ತಮಿಳುನಾಡು ಮೂಲದವರು. ಪ್ರಕರಣದಲ್ಲಿ ಬೇರೆಯವರು ಇದ್ದಾರಾ ಎಂಬ ಕುರಿತು ತನಿಖೆ ನಡೆಯುತ್ತಿದೆ. ಪೊಲೀಸರು ಆರೋಪಿಗಳನ್ನು ಮೈಸೂರಿಗೆ ಕರೆತಂದ ನಂತರ ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.
ಆಗಸ್ಟ್ 24ರಂದು ಸಂಜೆ ಮೈಸೂರಿನ ಲಲಿತಾದ್ರಿ ಗುಡ್ಡ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.
ಗೃಹ ಸಚಿವರಿಂದ ಸಿಎಂ ಭೇಟಿ: ಮೈಸೂರು ಹಾಗೂ ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಗ್ಯಾಂಗ್ ರೇಪ್ ಆರೋಪಿಗಳ ವಶವಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ್ದಾರೆ. ಪ್ರಕರಣದ ಬೆಳವಣಿಗೆ ಬಗ್ಗೆ ಅವರಿಗೆ ಮಾಹಿತಿ ನೀಡುತ್ತಿದ್ದಾರೆ.ಬೆಂಗಳೂರಿನಿಂದ ಡಿಜಿಪಿ ಪ್ರವೀಣ್ ಸೂದ್ ಅವರು ಮೈಸೂರಿಗೆ ಹೊರಟಿದ್ದಾರೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement