ಮೊದಲ ದಿನದ ಸಿಇಟಿ ಯಶಸ್ವಿ: ಜೀವಶಾಸ್ತ್ರಕ್ಕೆ 80.48%, ಗಣಿತ ಪರೀಕ್ಷೆಗೆ 93.90% ಹಾಜರಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆದ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೊದಲ ದಿನ ಶನಿವಾರ ಯಶಸ್ವಿಯಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ,ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಪರೀಕ್ಷೆಗೆ ನೋಂದಣಿ ಮಾಡಿಸಿದ್ದ ಒಟ್ಟು 2,01,834 ಅಭ್ಯರ್ಥಿಗಳಲ್ಲಿ, 1,62,439 (80.48%) ಅಭ್ಯರ್ಥಿಗಳು ಜೀವಶಾಸ್ತ್ರ ವಿಷಯಕ್ಕೆ ಮತ್ತು 1,89,522 (92.90%) ಅಭ್ಯರ್ಥಿಗಳು ಗಣಿತ ವಿಷಯಕ್ಕೆ ಹಾಜರಾಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.
530 ಪರೀಕ್ಷಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮತ್ತು ಬೆಂಗಳೂರಿನಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ ಎಲ್ಲ ಸುರಕ್ಷತೆಯ ಕ್ರಮವನ್ನು ಅನುಸುರಿಸಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಿರುವ ಎಸ್ಓಪಿ ಅನುಸಾರ ಕೋವಿಡ್-19 ಪಾಸಿಟೀವ್ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಿದ್ದು, ರಾಜ್ಯದ ವಿವಿಧ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿ ಪರೀಕ್ಷೆಯನ್ನು ನಡೆಸಲಾಗಿದೆ. ಜೀವಶಾಸ್ತ್ರ ವಿಷಯಕ್ಕೆ 09 ಮತ್ತು ಗಣಿತ ವಿಷಯಕ್ಕೆ 12 ಕೋವಿಡ್ ಪಾಸಿಟಿವ್ ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಅವರು ಸಚಿವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement