1,242 ಸಹಾಯಕ ಪ್ರಾಧ್ಯಾಪಕ’ರ ಹುದ್ದೆಗೆ ಸರ್ಕಾರದಿಂದ ಅಧಿಸೂಚನೆ

posted in: ರಾಜ್ಯ | 0

ಬೆಂಗಳೂರು:ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ 1,242 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ಈ ಕುರಿತು ಉನ್ನತ ಶಿಕ್ಷಣ ಇಲಾಖೆ ( ಕಾಲೇಜು ಶಿಕ್ಷಣ ) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಹರ್ಷ ಅಧಿಸೂಚನೆ ಹೊರಡಿಸಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ ಮಾಡುವ ಸಂಬಂಧ 2015ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಭರ್ತಿಯಾಗದಿರುವ 145 ಹುದ್ದೆಗಳನ್ನೊಳಗೊಂಡಂತೆ ಪ್ರಸ್ತುತ ಭರ್ತಿ ಮಾಡಬೇಕಾಗಿರುವ 1097 ಹುದ್ದೆಗಳು ಸೇರಿ 1242 ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ವಿಶೇಷ ನೇಮಕಾತಿ ನಿಯಮಗಳನ್ವಯ ಭರ್ತಿ ಮಾಡಲು ಆಯ್ಕೆ ಪ್ರಕ್ರಿಯೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಆಯ್ಕೆ ಪ್ರಾಧಿಕಾರವನ್ನಾಗಿ ಆಯ್ಕೆ ಮಾಡಿ ಅಧಿಸೂಚಿಸಲಾಗಿದೆ. ಅಧಿಸೂಚನೆ ಹೊರಡಿಸಿದ್ದಾರೆ.
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಯುಜಿಸಿ ವೇತನ ಶ್ರೇಣಿ 57,700 ರೂ.ಗಳಿಂದ 1,82,400 ರಲ್ಲಿ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದೆ.
1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಶೇ.95ರಷ್ಟು ನೇರನೇಮಕಾತಿ ಮೂಲಕ ಹಾಗೂ ಶೇ.5ರಷ್ಟು ಇಲಾಖೆಯ ಗ್ರೂಪ್ ಸಿ ವೃಂದದಿಂದ ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಸಹಾಯಕ ಪ್ರಾಧ್ಯಾಪಕರ ವಿಶೇಷ ನೇಮಕಾತಿ ನಿಯಮಗಳ ಅನ್ವಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನಿಯಮಾನುಸಾರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೀಸಲಾತಿ ಮತ್ತು ರೋಸ್ಟರ್ ಬಿಂದುಗಳನ್ವಯ ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಿದ್ದಾರೆ. ಇಂತಹ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸದ್ಯದಲ್ಲೇ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement