ಕರ್ನಾಟಕದಲ್ಲಿ ಶನಿವಾರ 1,229 ಮಂದಿಗೆ ಕೊರೊನಾ ಹೊಸ ಸೋಂಕು, ಬೆಂಗಳೂರಿನಲ್ಲಿ ಸಾವಿಲ್ಲ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಸಂಖ್ಯೆ ಮತ್ತು ಸಾವಿನ ಸಂಖ್ಯೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು (ಶನಿವಾರ) ಸೋಂಕಿನಿಂದ ಯಾವುದೇ ಸಾವಿನ ವರದಿಯಾಗಿಲ್ಲ
.ರಾಜ್ಯದಲ್ಲಿ ಶನಿವಾರ 1,229 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಹಾಗೂ 1,289 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.
ಬಾಗಲಕೋಟೆ,ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.ಜೊತೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.66 ಇಳಿಕೆಯಾಗಿದೆ.ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ 1.05 ಕ್ಕೆ ಇಳಿಕೆಯಾಗಿದೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,897ಕ್ಕೆ ಇಳಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,45,993 ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಸಂಖ್ಯೆ 28,89,809ಕ್ಕೆ ಹೆಚ್ಚಳವಾಗಿದೆ.
ಸೋಂಕಿನಿಂದ ರಾಜ್ಯದಲ್ಲಿ ಒಟ್ಟಾರೆಯಾಗಿಮೃತಪಟ್ಟವರ ಸಂಖ್ಯೆ 37,261ಕ್ಕೆ ಏರಿದೆ.
ರಾಜಧಾನಿ ಬೆಂಗಳೂರಿನಲ್ಲಿ 310 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 329 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರು ಹೊರತುಪಡಿಸಿ ದಕ್ಷಿಣ ಕನ್ನಡ – 207, ಹಾಸನ – 103, ಕೊಡಗು – 75, ಮೈಸೂರು -82, ಉಡುಪಿ – 146 ಹೆಚ್ಚು ಪ್ರಕರಣಗಳು ದಾಖಲಾಗಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಮೈಸೂರು ಯುವ ದಸರಾ ಉದ್ಘಾಟಕರಾಗಿ ಖ್ಯಾತ ನಟ ಪ್ರಭುದೇವಗೆ ಆಹ್ವಾನ

28-08-2021 HMB Kannada

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement