ಇಂದಿನಿಂದ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: 12 ಜಿಲ್ಲೆಗಳಲ್ಲಿ ಹೈ ಅಲರ್ಟ್

ಬೆಂಗಳೂರು: ಬಂಗಾಳ ಉಪ ಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಆ.29ರಿಂದ ಸೆ.1ರ ವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆ.29ರಂದು ಆರೆಂಜ್ ಅಲರ್ಟ್ ಹಾಗೂ 30ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮೈಸೂರು, ಕೊಡಗು, ಚಾಮರಾಜನಗರ,
ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಾದ್ಯಂತ ಶನಿವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಬುಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಉಡುಪಿಯ ಬ್ರಹ್ಮಾವರದಲ್ಲಿ 13 ಸೆಂ.ಮೀ, ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ 10 ಸೆಂ.ಮೀ, ಶಿವಮೊಗ್ಗದ ಆಗುಂಬೆಯಲ್ಲಿ 8 ಸೆಂ.ಮೀ., ಉಡುಪಿಯ ಕಾರ್ಕಳ, ಕೊಡಗಿನ ಭಾಗಮಂಡಲದಲ್ಲಿ ತಲಾ 7 ಸೆಂ.ಮೀ, ಉತ್ತರ ಕನ್ನಡದ ಶಿರಾಲಿ, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ತಲಾ 6 ಸೆಂ.ಮೀ, ಮಂಗಳೂರು, ದಕ್ಷಿಣ ಕನ್ನಡದ ಸುಳ್ಯ, ಉತ್ತರ ಕನ್ನಡದ ಭಟ್ಕಳ, ಮಂಕಿ ಹಾಗೂ ಕದ್ರಾ, ಉಡುಪಿಯ ಕುಂದಾಪುರದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ನಿರೀಕ್ಷಿಸಲಾಗಿದೆ. ಈ ಜಿಲ್ಲೆಗಳನ್ನು ಎಲ್ಲೋ ಅಲರ್ಟ್ ಜಿಲ್ಲೆಗಳಿಂದ ಪರಿಗಣಿಸಿ, ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement