ಮೈಸೂರು ಗ್ಯಾಂಗ್‌ ರೇಪ್‌ ಪ್ರಕರಣ: ಭಯಾನಕವಾಗಿದೆ ಅತ್ಯಾಚಾರ ಆರೋಪಿಗಳ ಹಿನ್ನೆಲೆ..!

ಮೈಸೂರು: ಮೈಸೂರು: ರಾಷ್ಟ್ರಾದ್ಯಂತ ಸಂಚಲನ ಮೂಡಿಸಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಲ್ಲಿ ಒಬ್ಬ ಶ್ರೀಗಂಧ ಚೋರ. ಇನ್ನೊಬ್ಬ ವಿವಿಧ ಪ್ರಕರಣಗಳ ಅಪರಾಧ ಹಿನ್ನೆಲೆಯುಳ್ಳವನು ಎಂಬುದು ಪೊಲೀಸ್‌ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.
ತನಿಖಾ ತಂಡಗಳು ಆರೋಪಿಗಳ ಹಿನ್ನೆಲೆಯನ್ನು ಶೋಧಿಸುತ್ತಾ ಹೋದಾಗ ಕೆಲ ಆರೋಪಿಗಳ ಹಿಂದಿನ ದುಷ್ಕೃತ್ಯಗಳು ಬೆಚ್ಚಿ ಬೀಳಿಸಿವೆ.
ಆರೋಪಿಗಳ ಪೈಕಿ ಒಬ್ಬಾತ ತಮಿಳುನಾಡಿನ ಸೊಸೈಪುರಂ ಗ್ರಾಮದವನಾಗಿದ್ದು, ಈತ ಆರು ತಿಂಗಳ ಹಿಂದೆ ಶ್ರೀಗಂಧ ಮರ ಕಳ್ಳತನ ಪ್ರಕರಣದಲ್ಲಿ ನಜರ್‍ಬಾದ್ ಪೊಲೀಸರಿಗೆ ಸಿಕ್ಕಿ ಬಿದ್ದು , ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದಾನೆ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
ಈ ಪ್ರಕರಣದ ಮತ್ತೊಬ್ಬ ಆರೋಪಿ ವಿರುದ್ಧ ಮೈಸೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈತ ಕಳ್ಳತನ, ದರೋಡೆಗೆ ಮೈಸೂರನ್ನು ಅಡ್ಡೆ ಮಾಡಿಕೊಂಡಿದ್ದ ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.ಈ ಪ್ರಕರಣದ ಮತ್ತೊಬ್ಬ ಆರೋಪಿ ತಾನು ಪ್ರೀತಿಸುತ್ತಿದ್ದ ಯುವತಿಯ ತಂದೆಯನ್ನೇ ಕೊಲೆ ಮಾಡಿ ಶಿಕ್ಷೆ ಅನುಭವಿಸಿದ್ದಾನೆ ಎಂದು ಸಹ ತನಿಖೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ.
ವಿದ್ಯಾರ್ಥಿನಿ ಮೇಲಿನ ಗ್ಯಾಂಗ್‍ರೇಪ್ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಕ್ರಿಮಿನಲ್ ಹಿನ್ನೆಲೆ ಇರುವವರೇ ಈ ಕೃತ್ಯವೆಸಗಿರಬಹುದೆಂಬ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಹಿನ್ನೆಲೆಯುಳ್ಳವರ ಪಟ್ಟಿಯನ್ನು ಪರಿಶೀಲನೆ ನಡೆಸಿ ಪಾತಕಿಗಳ ಬೆನ್ಹತ್ತಿ ಐದು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಒಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
10 ದಿನಗಳ ಕಾಲ ಪೊಲೀಸ್ ಕಸ್ಟಡಿ:
ವಿದ್ಯಾರ್ಥಿನಿ ಮೇಲಿನ ಗ್ಯಾಂಗ್‍ರೇಪ್ ಪ್ರಕರಣದ ಐವರು ಆರೋಪಿಗಳನ್ನು ಇಲ್ಲಿನ ಜಿಲ್ಲಾ ಪ್ರಧಾನ ನ್ಯಾಯಾಲಯ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ನಿನ್ನೆ (ಶನಿವಾರ) ಸಂಜೆ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾೀಶರ ಮುಂದೆ ಐದು ಮಂದಿ ಆರೋಪಿಗಳನ್ನು ಆಲನಹಳ್ಳಿ ಠಾಣೆ ಪೊಲೀಸರು ಹಾಜರುಪಡಿಸಿದ್ದು, ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸರ ವಶಕ್ಕೆ ನ್ಯಾಯಾೀಶರು ನೀಡಿದರು.
ಈ ಐದೂ ಮಂದಿ ಆರೋಪಿಗಳನ್ನುಪೊಲೀಸರು ಅಜ್ಞಾತ ಸ್ಥಳದಲ್ಲಿರಿಸಿ, ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ. ಆರೋಪಿಗಳನ್ನು ಚಾಮುಂಡಿ ಬೆಟ್ಟ ತಪ್ಪಲಿನ ಲಲಿತಾದ್ರಿಪುರ ರಸ್ತೆಯ ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿ ಹೇಳಿಕೆ ದಾಖಲು ಮಾಡಿಕೊಂಡರು.
ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನಿಂದ ಹಣ, ಚಿನ್ನಾಭರಣ ಕಿತ್ತುಕೊಂಡಿದ್ದಾರೆಯೇ ಎಂಬ ಬಗ್ಗೆಯೂ ಕೂಡ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಆರೋಪಿಗಳು ಪ್ರತಿ ದಿನ ಮೈಸೂರಿಗೆ ಬಂದು ಹೋಗುತ್ತಿದ್ದರೇ ಅಥವಾ ವಾರಕ್ಕೆ ಒಂದೆರಡು ಬಾರಿ ಬರುತ್ತಿದ್ದರೆ..?, ಗೂಡ್ಸ್ ವಾಹನದಲ್ಲಿ ತರಕಾರಿ ತೆಗೆದುಕೊಂಡು ಬಂದು ಯಾವ ಸ್ಥಳದಲ್ಲಿ ಮಾರಾಟ ಮಾಡುತ್ತಿದ್ದರು. ಬೇರೆ ಊರಿಗೂ ತರಕಾರಿ ತೆಗೆದುಕೊಂಡು ಹೋಗುತ್ತಿದ್ದರೆ ಎಂಬಿತ್ಯಾದಿ ಸಂಗತಿಗಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement