ಅತ್ಯಾಚಾರ ಆರೋಪಿ ಅನುಮಾನಾಸ್ಪದ ಸಾವು: ಪಿಎಸ್​ಐ ಸೇರಿ ಐವರ ಅಮಾನತು

ವಿಜಯಪುರ: ಸಿಂದಗಿಯಲ್ಲಿನ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಅನುಮಾನಾಸ್ಪದವಾಗಿ ಸಾವಿಗೀಡಾದ ಹಿನ್ನೆಲೆ‌ ಪಿಎಸ್​ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಪಿಎಸ್‌ಐ ಹಾಗೂ ಇತರ ನಾಲ್ವರನ್ನು ಅಮಾನತು ಮಾಡಿ ಎಸ್​ಪಿ ಆನಂದಕುಮಾರ್​ ಆದೇಶ ಹೊರಡಿಸಿದ್ದಾರೆ.
ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಡಾಬಾದಲ್ಲಿ ತಂದೆಯೊಂದಿಗೆ ವಾಸವಿದ್ದ 13 ವರ್ಷದ ಬಾಲಕಿ ಮೇಲೆ ಡಾಬಾ ಮಾಲೀಕ ದೇವಿಂದ್ರ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆಯ ತಂದೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೇವಿಂದ್ರ ಸಂಗೋಗಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಟಾಯ್ಲೆಟ್​ಗೆ ಹೋಗುವುದಾಗಿ ಹೇಳಿ ಪೊಲೀಸ್​ ಠಾಣೆಯ ಶೌಚಗೃಹಕ್ಕೆ ಹೋದವ ಅಲ್ಲೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ.
ಕರ್ತವ್ಯಲೋಪದ ಆಧಾರದ ಮೇಲೆ ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement