ಪುರುಷರ ಟಾಯ್ಲೆಟ್​ನಲ್ಲಿ ಅಡಗಿ ಕುಳಿತಿದ್ದ ಡ್ರಗ್ಸ್​ ಆರೋಪಿ ಸೋನಿಯಾ; ಪ್ರಕರಣದಲ್ಲಿ ಇನ್ನಷ್ಟು ಸೆಲೆಬ್ರಿಟಿಗಳು..?

ಬೆಂಗಳೂರು; ಮಾದಕ ವಸ್ತು ಜಾಲದಲ್ಲಿ ತೊಡಗಿಕೊಂಡಿರುವವರನ್ನು ಮಟ್ಟಹಾಕಲು ಮುಂದಾಗಿರುವ ಬೆಂಗಳೂರು ಪೊಲೀಸರು ಈಗಾಗಲೇ ಸಿಕ್ಕಿಬಿದ್ದಿರುವ ಡ್ರಗ್​ ಪೆಡ್ಲರ್​ಗಳು ನೀಡಿದ ಮಾಹಿತಿ ಆಧರಿಸಿ ಸೋಮವಾರ (ಆ.30) ಬೆಳಗ್ಗೆಯೇ ಕೆಲವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮಾಡೆಲ್​ ಸೋನಿಯಾ ಅಗರ್ವಾಲ್, ಉದ್ಯಮಿ ಭರತ್​ ಹಾಗೂ ಡಿಜೆ ವಚನ್​ ಚಿನ್ನಪ್ಪ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಮಾದಕವಸ್ತುಗಳು ಪತ್ತೆ ಆಗಿವೆ. ಹಾಗಾಗಿ ಭರತ್​ ಹಾಗೂ ವಚನ್​ ಚಿನ್ನಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಆದರೆ ಮಾಡೆಲ್​ ಸೋನಿಯಾ‌ ಅಗರ್ವಾಲ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಣ್ಣಾಮಚ್ಚಾಲೆ ಆಡಿದ್ದಾರೆ ಎಂದು ಟಿವಿ9 ಕನ್ನಡ.ಕಾಮ್‌ ವರದಿ ಮಾಡಿದೆ.
ಸೋನಿಯಾ ನಿವಾಸದಲ್ಲಿ ಪೊಲೀಸರಿಗೆ 40 ಗ್ರಾಂ ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಇರಲಿಲ್ಲ. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದರು. ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ಸೋನಿಯಾ ಬೆಂಗಳೂರಿನ ಖಾಸಗಿ ಹೋಟೆಲ್​ಗೆ ತೆರಳಿದ್ದರು. ಪೊಲೀಸರ ಕಣ್ಣಿಗೆ ಮಣ್ಣೆರೆಚಲು ಅವರು ಪುರುಷರ ಶೌಚಾಲಯಕ್ಕೆ ತೆರಳಿ ಅಡಗಿಕೊಂಡಿದ್ದರು.ಎಷ್ಟೇ ಹೇಳಿದರೂ ಹೊರಗೆ ಬರಲಿಲ್ಲ. ಅಲ್ಲದೆ ಮಾಧ್ಯಮದ ಮುಂದೆ ಬಂದರೆ ನನ್ನ ಮರ್ಯಾದೆ ಹೋಗುತ್ತದೆ ಎಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಳು ಎನ್ನಲಾಗಿದೆ. ಅಂತಿಮವಾಗಿ ಅಂತಿಮವಾಗಿ ಮಹಿಳಾ ಕಾನ್ಸ್​ಟೇಬಲ್​ ಸಹಾಯದಿಂದ ಅವರನ್ನು ಹೊರಗೆ ಕರೆತರಲಾಯಿತು ಎಂದು ವರದಿ ಹೇಳಿದೆ.
ಡಿ.ಜೆ. ಹಳ್ಳಿ ಠಾಣೆಯಲ್ಲಿ ಸೋನಿಯಾ ಅವರ ವಿಚಾರಣೆ ನಡೆಸಲಾಗುತ್ತಿದೆ. ಸದ್ಯದಲ್ಲೇ ಸೋನಿಯಾರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸುವ ಸಾಧ್ಯತೆಯಿದೆ. ಪೊಲೀಸರ ವಶದಲ್ಲಿ ಇರುವ ಆರೋಪಿಗಳಿಗೆ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಜೊತೆ ಸಂಪರ್ಕ ಇತ್ತು ಎನ್ನಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಿದರೆ ಇನ್ನಷ್ಟು ಹೆಸರುಗಳು ಹೊರಬರುವ ಸಾಧ್ಯತೆ ಇದೆ.
ಈ ಮಧ್ಯೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್ ಅವರು ಹೇಳಿಕೆ ನೀಡಿದ್ದು, ‘ರಾಜಕೀಯ ಒತ್ತಡಕ್ಕೆ ಪೊಲೀಸರು ಮಣಿಯುವುದಿಲ್ಲ. ಯಾರನ್ನೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ. ಕಳೆದ ವರ್ಷ ಕೂಡ ರಾಗಿಣಿ ದ್ವಿವೇದಿ ಸೇರಿದಂತೆ ಅನೇಕರು ಬಂಧಿಸಲಾಗಿತ್ತು. ಸಿನಿಮಾ, ಕಿರುತೆರೆ ಕ್ಷೇತ್ರದ ಹಲವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement