ಮಹತ್ವದ ನಿರ್ಧಾರ.. ಕರ್ನಾಟಕದಲ್ಲಿ 6 ರಿಂದ 8ನೇ ತರಗತಿ ಸೆಪ್ಟೆಂಬರ್‌ 6ರಿಂದ ಆರಂಭ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಶೇ.2ಕ್ಕಿಂತ ಕಡಿಮೆ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣ ಕ್ರಮ ಅನುಸರಿ 6 ರಿಂದ 8ನೇ ತರಗತಿಗಳನ್ನು ಸೆಪ್ಟೆಂಬರ್ 6ರಿಂದ ಆರಂಭಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ನಡೆದ ತಾಂತ್ರಿಕ ತಜ್ಞರ ಸಭೆಯ ಬಳಿಕ ಸಭೆಯ ನಿರ್ಧಾರಗಳ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದರು ಶನಿವಾರ ಮತ್ತು ಭಾನುವಾರ ಹೊರತುಪಡಿಸಿ, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 6 ರಿಂದ 8ನೇ ತರಗತಿಗಳನ್ನು ಸೆಪ್ಟೆಂಬರ್ 6 ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ಬ್ಯಾಚ್ ಮಾದರಿಯಲ್ಲಿ 6 ರಿಂದ 8ನೇ ತರಗತಿ ಶಾಲೆಗಳು ನಡೆಯಲಿವೆ ಎಂದು ತಿಳಿಸಿದರು.
ಸೋಮವಾರದಿಂದ ಶುಕ್ರವಾರದವರೆಗೆ ಶಾಲೆಗಳನ್ನು ನಡೆಸಲಾಗುತ್ತದೆ. ಶನಿವಾರ ಮತ್ತು ಭಾನುವಾರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೇರಳದಿಂದ ಬರುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಶೇ.50ರಷ್ಟು ಮಕ್ಕಳು ಮಾತ್ರ ಶಾಲೆಗ ಹಾಜರಾಗಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲು ಅನುಮತಿ ಇಲ್ಲ ಎಂದರು.
. ಕೊಡಗು, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದೆಡೆ ಕೊರೊನಾ ನಿರ್ಬಂಧ ಸಡಿಲಿಸಲಾಗುವುದು ಎಂದು ತಿಳಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುತ್ತಿದ್ದೇವೆ. ಛತ್ರಗಳ ಮಾಲೀಕರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಹೀಗಾಗಿ, ಮದುವೆ, ಮತ್ತಿತರೆ ಸಮಾರಂಭಗಳಲ್ಲಿ 400 ಜನ ಸೇರಬಹುದು ಎಂದು ಹೇಳಲಾಗಿದೆ ಎಂದು ಆರ್. ಅಶೋಕ್ ಮಾಹಿತಿ ನೀಡಿದ್ಧಾರೆ.
ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಗಣೇಶ ಹಬ್ಬ ಆಚರಣೆಗೆ ಅವಕಾಶ ನೀಡುವ ಸಂಬಂಧ ಮುಕ್ಕಾಲು ಗಂಟೆ ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಕೊರೊನಾ ನಿಯಂತ್ರಣ ಕ್ರಮಗಳೊಂದಿಗೆ ಅನುಮತಿ ನೀಡುವ ಕುರಿತಂತೆ ಮತ್ತೆ ಸೆಪ್ಟೆಂಬರ್ 3ರಂದು ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೇರಳದಲ್ಲಿ ಓಣಂ ಸಂದರ್ಭದಲ್ಲಿಯೇ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯಾದ್ಯಂತ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಉಡುಪಿ, ಚಿಕ್ಕಮಗಳೂರು, ಮೈಸೂರು, ಹಾಸನ, ಕೋಲಾರ, ಕಲಬುರಗಿಗಳಲ್ಲಿ ಕೋವಿಡ್ ಸೋಂಕು ಹರಡುವಿಕೆ ಪ್ರಮಾಣ ಶೇ.1.5ಕ್ಕಿಂತ ಕಡಿಮೆ ಇರುವ ಕಾರಣ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement