ಕರ್ನಾಟಕದಲ್ಲಿ ಸೆ.5ರ ವರೆಗೂ ಭಾರೀ ಮಳೆ ಮುನ್ಸೂಚನೆ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ 5ರ ವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ(Coastal), ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ( ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಸೆಪ್ಟೆಂಬರ್​ 5ರ ವರೆಗೆ ರಾಜ್ಯ ಹಲವು ಕಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು,ಹಾಸನ, ಚಿಕ್ಕಬಳ್ಳಾಪುರ, ಮತ್ತು ಕೋಲಾರ ಜಿಲ್ಲೆಗಳಲ್ಲಿ ಸೆ.5ರ ವರೆಗೂ ವ್ಯಾಪಕ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ.
ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಬಹದು ಎಂದು ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ತುಮಕೂರು,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ.
ನಿನ್ನೆ ಉಡುಪಿ ಜಿಲ್ಲೆಯ ಕುಂದಾಪುರದ ಕೋನಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 93 ಮಿ.ಮೀ. ಮಳೆ ದಾಖಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆಯ(IMD-India Meteorological Department) ಮಾಹಿತಿ ಪ್ರಕಾರ, ಇಂದು ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಸುಬ್ರಹ್ಮಣ್ಯ, ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement