ಬೊಮ್ಮಾಯಿ ನಾಯಕತ್ವದಲ್ಲೇ ಕರ್ನಾಟಕದ ಮುಂದಿನ ವಿಧಾನಸಭೆ ಚುನಾವಣೆ: ಅಮಿತ್ ಶಾ ಘೋಷಣೆ

ದಾವಣಗೆರೆ,: ಕರ್ನಾಟಕದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿದೆ. ಈ ಮೂಲಕ ಮತ್ತೆ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ್ದಾರೆ.
ದಾವಣಗೆರೆ ನಗರದ ಜಿಎಂಐಟಿಯಲ್ಲಿ ಗಾಂಧಿಭವನ, ಕೊಂಡಜ್ಜಿಯ ಪಬ್ಲಿಕ್ ಶಾಲೆಯ ಉದ್ಘಾಟನೆಯನ್ನು ಬಟನ್ ಒತ್ತುವ ಮೂಲಕ‌ ನೆರವೇರಿಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಸ್ವಯಂ ನಿರ್ಧಾರ ತೆಗೆದುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ‌. ನಂತರ ಮುಖ್ಯಮಂತ್ರಿ ಆದ ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಹಾಗೂ ರಾಜಕೀಯವಾಗಿ ಉತ್ತಮ ನಡವಳಿಕೆ, ಹೆಸರು ಹೊಂದಿರುವ ಬೊಮ್ಮಾಯಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಮುಂದಿನ ಚುನಾವಣೆಯನ್ನು ಬಿಜೆಪಿ ಎದುರಿಸಲಿದೆ ಎಂದು ಘೋಷಿಸಿದರು.
ಯಡಿಯೂರಪ್ಪ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವರು. ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷ ಒಳ್ಳೆಯ ಕೆಲಸ ಮಾಡಿದ್ದಾರೆ. ರೈತರು, ಜನರು, ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಒಳ್ಳೆಯ ಆಡಳಿತ ನೀಡಿದ್ದಾರೆ‌. ಪಕ್ಷಕ್ಕೆ ಅವರ ಕೊಡುಗೆ ಪಕ್ಷಕ್ಕೆ ದೊಡ್ಡದಿದೆ ಎಂದರು.
ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕತೆಗೂ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇದೆಲ್ಲವನ್ನೂ ನಿಭಾಯಿಸಿಕೊಂಡು ಬಂದಿದೆ. ದೇಶಾದ್ಯಂತ ಕೋವಿಡ್ ಲಸಿಕೆ ನೀಡಿಕೆ ಕಾರ್ಯ ಜೋರಾಗಿ ನಡೆಯುತ್ತಿದೆ. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಲಸಿಕೆ ನೀಡುವ ಕಾರ್ಯ ಮಾಡಲಾಗುತ್ತದೆ,” ಎಂದು ಭರವಸೆ ನೀಡಿದರು.
ಕೊರೊನಾ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮ
“ಕೊರೊನಾ ಎಂಬ ಮಹಾಮಾರಿ ಕೇವಲ ಭಾರತ ಮಾತ್ರವಲ್ಲ, ವಿಶ್ವವನ್ನೇ ಕಂಗೆಡಿಸಿದೆ. ಇದನ್ನು ಸಮರ್ಥವಾಗಿ ಎದುರಿಸಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದಿಂದ ಸಾವಿರಾರು ಕೋಟಿ ರೂಪಾಯಿಯನ್ನು ಕೊರೊನಾ ಲಸಿಕೆಗೆ ನೀಡಲಾಗುತ್ತಿದೆ. ಆಕ್ಸಿಜನ್ ಪ್ಲಾಂಟ್ ಸ್ಥಾಪನೆ ಆಗುತ್ತಿದೆ. ಜನರ ಕಣ್ಣೊರೆಸಿದೆ. ಆದರೆ ಕೊರೊನಾಕ್ಕೆ ಅನೇಕ ವಾರಿಯರ್ಸ್ ಮೃತಪಟ್ಟಿದ್ದು ಬೇಸರದ ಸಂಗತಿ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement