ಮೂತ್ರ ನೆಕ್ಕಿಸಿದ ಪ್ರಕರಣ; ಪಿಎಸ್‌ಐಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದಲ್ಲಿ ಬಂಧಿಸಲಾಗಿರುವ ಪಿಎಸ್‌ಐ ಅರ್ಜುನ ಹೊರಕೇರಿ ಅವರನ್ನು ಸಿಐಡಿ ಪೊಲೀಸರು ಗುರುವಾರ ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ಪರಿಶಿಷ್ಟ ಸಮುದಾಯದ ಯುವಕ ಪುನೀತ್ ಮೇಲೆ ದೌರ್ಜನ್ಯ ನಡೆಸಿದ, ಮೂತ್ರ ನೆಕ್ಕಿಸಿದ ಆರೋಪ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್‌ಐ ಅರ್ಜುನ್ ಮೇಲಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಅರ್ಜುನ್ ಅವರನ್ನು ಬಂಧಿಸಿದ್ದರು.
ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕರೆತಂದ ಸಿಐಡಿ ಪೊಲೀಸರ ತಂಡ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಮೊದಲನೇ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪುಷ್ಪಲತಾ ಆರೋಪಿ ಅರ್ಜುನ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು
ಮೇ 10ರಂದು ಪರಿಶಿಷ್ಟ ಸಮುದಾಯದ ಯುವಕನ ಮೇಲೆ ದೌರ್ಜನ್ಯ ಹಾಗೂ ಮೂತ್ರ ನೆಕ್ಕಿಸಿದ ಆರೋಪದ ಮೇಲೆ ಪಿಎಸ್‌ಐ ಅರ್ಜುನ್ ವಿರುದ್ಧ ಮೇ 22ರಂದು ದೂರು ದಾಖಲಾಗಿತ್ತು. ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಪಿಎಸ್‌ಐ ಅರ್ಜುನ್ ತಲೆಮರೆಸಿಕೊಂಡಿದ್ದರು.ಬುಧವಾರ ರಾತ್ರಿ ಬಂಧಿಸಲಾಗಿತ್ತು.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement