ಚುನಾವಣೋತ್ತರ ಹಿಂಸಾಚಾರ:ಸಿಬಿಐಗೆ ಸ್ವತಂತ್ರವಾಗಿ ಕೆಲಸ ಮಾಡಲಾಗದು, ಸುಪ್ರೀಂಕೋರ್ಟಿಗೆ ತಿಳಿಸಿದ ಪಶ್ಚಿಮ ಬಂಗಾಳ ಸರ್ಕಾರ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಗಲಭೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಯಿಂದ (ಸಿಬಿಐ) ತನಿಖೆ ನಡೆಸಲು ಆದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಸಿಬಿಐ ಸ್ವತಂತ್ರವಾಗಿ ಕೆಲಸ ಮಾಡಲಾಗದು ಎಂದು ಕೋರ್ಟಿಗೆ ತಿಳಿಸಿದೆ.
ರಾಜ್ಯದಲ್ಲಿ ಈ ಹಿಂದಿನ ಅನುಭವಗಳನ್ನು ಗಮನಿಸಿದರೆ ಸಿಬಿಐ ಸ್ವತಂತ್ರವಾಗಿ ಕೆಲಸ ಮಾಡಲಾಗದು ಎಂಬುದು ತಿಳಿದುಬರುತ್ತದೆ. ಸಿಬಿಐ ಅನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ರಾಜ್ಯದ ಪ್ರತಿನಿಧಿಗಳಿಗೆ ಕಿರುಕುಳ ನೀಡುವ ಸಾಧನವನ್ನಾಗಿ ಬಳಸಲಾಗಿದೆ. ಪಶ್ಚಿಮ ಬಂಗಾಳದ ದೃಷ್ಟಿಯಿಂದ ಪ್ರಾಮಾಣಿಕ ಮತ್ತು ನಿಷ್ಪಕ್ಷಪಾತವಾದ ತನಿಖೆಯನ್ನು ಸಿಬಿಐನಿಂದ ನಿರೀಕ್ಷಿಸಲಾಗದು. ಸ್ವಾತಂತ್ರ್ಯದ ಕೊರತೆಯಿಂದಾಗಿ ವಿವಿಧ ರಾಜ್ಯಗಳ ಹೈಕೋರ್ಟ್‌ಗಳು ಸಿಬಿಐಗೆ ಛಾಟಿ ಬೀಸಿರುವುದು ಇಲ್ಲಿ ಉಲ್ಲೇಖನೀಯ. ಅಲ್ಲದೇ. ಸಿಬಿಐಯನ್ನು ಪಂಜರದ ಗಿಳಿ ಎಂದು ಸರಿಯಾಗಿ ವ್ಯಾಖ್ಯಾನಿಸಲಾಗಿದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ.
ವರದಿ ಪ್ರಕಾರ, ಸಮಯಕ್ಕೆ ಸರಿಯಾಗಿ ಆರೋಪ ಪಟ್ಟಿ ಸಲ್ಲಿಸುವುದು ಮತ್ತು ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವಲ್ಲಿ ಸಿಬಿಐ ಸಾಧನೆ ದಯನೀಯವಾಗಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದು, ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ತನಿಖೆ ನಡೆಸಲು ಸಿಬಿಐ ವಿಫಲವಾಗಿದೆ ಎಂದು ಹೇಳಿದೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಆದೇಶವನ್ನೂ ಉಲ್ಲೇಖಿಸಲಾಗಿದೆ. ಪ್ರಕರಣಗಳನ್ನು ಸಿಬಿಐಗೆ ವಹಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವು ಸುಪ್ರೀಂ ಕೋರ್ಟ್‌ ರೂಪಿಸಿರುವ ತತ್ವಗಳಿಗೆ ಪೂರಕವಾಗಿಲ್ಲ ಎಂದು ವಾದಿಸಲಾಗಿದೆ.

ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ಎನ್‌ಎಚ್‌ಆರ್‌ಸಿ ನೇಮಿಸಿದ್ದ ಸಮಿತಿಯ ಮೇಲೆ ಪಕ್ಷಪಾತದ ಕರಿನೆರಳು
ಚುನಾವಣೋತ್ತರ ಗಲಭೆ ಪ್ರಕರಣಗಳ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥ ನಿವೃತ್ತ ನ್ಯಾ. ಅರುಣ್‌ ಮಿಶ್ರಾ ಅವರು ನೇಮಿಸಿದ್ದ ಸಮಿತಿಯು ಪಕ್ಷಪಾತದಿಂದ ಕೂಡಿತ್ತು ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದೆ.
ಸಮಿತಿಯ ಸದಸ್ಯರು ಬಿಜೆಪಿ ಸದಸ್ಯರು ಅಥವಾ ಆ ಪಕ್ಷದ ಜೊತೆ ನಿಕಟ ಸಂಪರ್ಕ ಹೊಂದಿದ್ದವರಾಗಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದ್ದು, ಹೈಕೋರ್ಟ್‌ ನ್ಯಾ. ಸೌಮೇನ್‌ ಸೇನ್‌ ಅಭಿಪ್ರಾಯವನ್ನು ಉಲ್ಲೇಖಿಸಲಾಗಿದೆ. ಸಮಿತಿಗೆ ಸೇರಿಸಲ್ಪಟ್ಟಿರುವ ಇಬ್ಬರು ಸದಸ್ಯರ ಹೆಸರುಗಳನ್ನು ತಡೆಯಬಹುದಾಗಿದ್ದು, ಇದರಿಂದ ಸಕಾರಣವುಳ್ಳ ಪಕ್ಷಪಾತದ ಆರೋಪವನ್ನು ನಿಯಂತ್ರಿಸಬಹುದಾಗಿದೆ” ಎಂದು ನ್ಯಾ. ಸೇನ್‌ ಹೇಳಿದ್ದರು.
ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಇದುವರೆಗೆ ಕೇವಲ ಶೇ. 3ರಷ್ಟು ಮಾತ್ರ ಬಂಧನ ಮಾಡಿದೆ ಎಂಬುದಕ್ಕೂ ರಾಜ್ಯ ಸರ್ಕಾರ ಆಕ್ಷೇಪಿಸಿದೆ. 1,429 ಪ್ರಕರಣಗಳಿಗೆ ಸಂಬಂಧಿಸಿದಂತೆ 8,852 ಆರೋಪಿಗಳಿದ್ದಾರೆ; 5,154 ಮಂದಿ ಬಂಧಿತರು/ಶರಣಾದವರು/ಜಾಮೀನಿನ ಮೇಲೆ ಹೊರಬಂದಿದ್ದಾರೆ; ಸಿಆರ್‌ಪಿಸಿ ಸೆಕ್ಷನ್‌ 41ಎ ಅಡಿ 2,989 ಮಂದಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಇದರರ್ಥ ಬಂಧಿತರು/ಶರಣಾದವರು/ಜಾಮೀನಿನ ಮೇಲೆ ಹೊರಬಂದಿರುವವರು ಶೇ. 58 ಮಂದಿಯಾಗಿದ್ದಾರೆ. ಎನ್‌ಎಚ್‌ಆರ್‌ಸಿ ನೇಮಿಸಿರುವ ಸಮಿತಿ ಹೇಳಿರುವಂತೆ ಶೇ. 3ರಷ್ಟಲ್ಲ ಎಂದು ಹೇಳಲಾಗಿದೆ ಎಂದು ವರದಿ ಹೇಳಿದೆ.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement