ದಾಖಲೆ ಬರೆದ ರಿಲಯನ್ಸ್.. 15 ಲಕ್ಷ ಕೋಟಿ ರೂ. ಮಾರುಕಟ್ಟೆ ಮೌಲ್ಯ ದಾಟಿದ ಮೊದಲ ಭಾರತೀಯ ಕಂಪನಿಯಾಯ್ತು ರಿಲಯನ್ಸ್ .!

ಮುಂಬೈ: ಶುಕ್ರವಾರ, ಐತಿಹಾಸಿಕ ಸಾಧನೆಯನ್ನು ಸಾಧಿಸಿದ ರಿಲಯನ್ಸ್ ಇಂಡಸ್ಟ್ರೀಸ್ (RIL) 15 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ದಾಟಿದ ಮೊದಲ ದೇಶೀಯ ಕಂಪನಿಯಾಯಿತು. ಅದರ ಷೇರಿನ ಬೆಲೆಯಲ್ಲಿ ಭಾರೀ ಏರಿಕೆಯನ್ನು ಗಮನಿಸಿದ ನಂತರ, ರಿಲಯನ್ಸ್ ಇಂಡಸ್ಟ್ರೀಸ್ ಮಾರುಕಟ್ಟೆ ಬಂಡವಾಳವು ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಟ್ರೇಡ್ ಚಾರ್ಟ್‌ಗಳಲ್ಲಿ 15, 14, 017.5 ಕೋಟಿ ರೂ.ಗಳನ್ನು ತಲುಪಿತು. … Continued

ಮುಖೇಶ್ ಅಂಬಾನಿ ನಿವಾಸದ ಹೊರಗೆ ಸ್ಫೋಟಕ ಪತ್ತೆ -ಉದ್ಯಮಿ ಮನ್ಸುಖ್ ಹಿರೇನ್ ಸಾವಿನ ಪ್ರಕರಣ: 9,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಹಾಗೂ ಮನ್‍ಸುಖ್‍ ಹಿರೇನ್ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಚಾರ್ಜ್‌ಶೀಟ್‌ ಸಲ್ಲಿಸಿದೆ. 9,000ಕ್ಕೂ ಹೆಚ್ಚು ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಸಿದೆ. ಬಿಲಿಯನೇರ್ ಉದ್ಯಮಿ ಮುಖೇಶ್ ಅಂಬಾನಿಯವರ ನಿವಾಸ ಆಂಟಿಲಿಯಾ ಹೊರಗೆ … Continued

ಶಿಕ್ಷೆ ಕೊಟ್ಟ ಮಹಿಳಾ ನ್ಯಾಯಾಧೀಶರ ಹುಡುಕುತ್ತಿದ್ದಾರೆ ಶಿಕ್ಷೆಗೊಳಗಾದ ತಾಲಿಬಾನಿಗಳು..!

ಕಾಬೂಲ್: ತಾಲಿಬಾನಿ ಕ್ರಿಮಿನಲ್‌ಗಳು ತಮಗೆ ಶಿಕ್ಷೆ ಕೊಟ್ಟ ನ್ಯಾಯಾಧೀಶರನ್ನು ಹುಡುಕುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾಬೂಲ್‌ನಿಂದ ಓಡಿ ಯುರೋಪ್‌ಗೆ ಓಡಿ ಬಂದು ಜೀವ ಉಳಿಸಿಕೊಂಡಿರುವ ಮಹಿಳಾ ನ್ಯಾಯಾಧೀಶರೊಬ್ಬರು ತಮಗಾದ ಅನುಭವ ಹೇಳಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬಳಿಕ ದೇಶದಲ್ಲಿ ಹಲವು ಕೃತ್ಯಗಳನ್ನು ನಡೆಸಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ … Continued

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ: ಶೇ. 53.81 ಮತದಾನ, ಹಕ್ಕು ಚಲಾಯಿಸಿದ ಕೋವಿಡ್‌ ಸೋಂಕಿತ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗಾಗಿ ಇಂದು (ಶುಕ್ರವಾರ) ಮತದಾನ ಶಾಂತಿಯುತವಾಗಿ ನಡೆಯಿತು. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಒಟ್ಟು 8,18,096 ಅರ್ಹ ಮತದಾರರ ಪೈಕಿ 4,40,251 ಮತದಾರರು ಮತ ಚಲಾಯಿಸಿದ್ದು, ಶೇ 53.81 ರಷ್ಟು … Continued

ರೈಲು ಪ್ರಯಾಣದ ವೇಳೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ..!: ಹೊಟ್ಟೆ ಕೆಟ್ಟಿತ್ತು ಎಂದ ಗೋಪಾಲ ಮಂಡಲ

ಪಾಟ್ನಾ: ಬಿಹಾರದ ಜೆಡಿಯು ಶಾಸಕರೊಬ್ಬರು ರೈಲು ಪ್ರಯಾಣದ ವೇಳೆ ಒಳಉಡುಪಿನಲ್ಲಿ ಕಾಣಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಬಿಹಾರದ ಜೆಡಿಯು ಶಾಸಕರಾದ ಗೋಪಾಲ್ ಮಂಡಲ್ (JDU MLA Gopal Mandal) ಅವರು ರೈಲು ಪ್ರಯಾಣದ ವೇಳೆ ಒಳಉಡುಪಿನಲ್ಲಿ ಓಡಾಡಿದ್ದಕ್ಕೆ ಸಹ ಪ್ರಯಾಣಿಕರು ಆಕ್ಷೇಪಿಸಿದ್ದಾರೆ. ಶಾಸಕ ಗೋಪಾಲ್ ಮಂಡಲ್ ಅವರು ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್‌ನ ಮೊದಲ ಎಸಿ ಕಂಪಾರ್ಟ್ಮೆಂಟ್‌ನಲ್ಲಿ … Continued

ತಮಿಳಿನಲ್ಲಿ ಮಂತ್ರ ಪಠನೆ: ಧಾರ್ಮಿಕ ಇಲಾಖೆ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ಚೆನ್ನೈ: ತಮಿಳುನಾಡಿನ ಹಿಂದೂ ದೇವಾಲಯಗಳಲ್ಲಿ ಸಂಸ್ಕೃತ ಮಾತ್ರವಲ್ಲದೇ ತಮಿಳಿನಲ್ಲೂ ಪೂಜೆ ಮಾಡಲು ತಮಿಳುನಾಡು ಧಾರ್ಮಿಕ ಮತ್ತು ದತ್ತಿ ಇಲಾಖೆ ಒತ್ತಾಯಿಸುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಪರಿಗಣಿಸಲು ಶುಕ್ರವಾರ ಮದ್ರಾಸ್‌ ಹೈಕೋರ್ಟ್‌ ನಿರಾಕರಿಸಿದೆ. 2008ರಲ್ಲಿ ವಿ. ಎಸ್‌. ಶಿವಕುಮಾರ್‌ ವರ್ಸಸ್‌ ಎಂ ಪಿಚ್ಚೈ ಬತ್ತಾರ್‌ ಪ್ರಕರಣದಲ್ಲಿ ಈ ವಿಚಾರವನ್ನು ತೀರ್ಮಾನಿಸಲಾಗಿದೆ ಎಂದು ಮುಖ್ಯ … Continued

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಡೆ: ಮೀನುಗಾರರ ರಕ್ಷಣೆ

ಹೊನ್ನಾವರ:ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಅಳಿವೆ ಪ್ರದೇಶದಲ್ಲಿ ನಡೆದಿದೆ. ಮುಳುಗಡೆಯಾದ ಬೋಟನ್ನು ಗಂಗೊಳ್ಳಿ ಮೂಲದ ಶ್ರೀಕೃಷ್ಣ ಭಂಡಾರಿ ಹೆಸರಿನ ಶಿವರಾಮ ಶ್ರೀಯಾನ್‌ ಅವರಿಗೆ ಸೇರಿದ್ದು ಎಂದು ಹೇಳಲಾಗಿದೆ. ಎರಡು ದಿನಗಳ ಹಿಂದೆ ಹೊನ್ನಾವರದ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿತ್ತು ಎನ್ನಲಾಗಿದೆ. ವಾಪಸ್ಸು ಬರುವ … Continued

ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಾವು

ಕಾರವಾರ: ವಾಹನ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತನನ್ನು ಧಾರವಾಡ ಜಿಲ್ಲೆಯ  ಮೈಲಾರಿ ಸಹದೇವಪ್ಪ  ಜರಗ (23) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಯಿಂದ ಕಾರವಾರ ನಗರಕ್ಕೆ ಇಲೆಕ್ಟ್ರಿಕಲ್ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಎನ್ನಲಾಗಿದ್ದು, ಶುಕ್ರವಾರ ಅಣಶಿ ಮಾರ್ಗವಾಗಿ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಟಾಟಾ ಏಸ್ ವಾಹನದಲ್ಲಿಯೇ ಹೃದಯಾಘಾತ … Continued

ಕೋವಿಡ್‌ ಪರಿಸ್ಥಿತಿ ಗಂಭೀರ..: 11ನೇ ತರಗತಿ ಪರೀಕ್ಷೆ ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಕೋವಿಡ್‌ ಪ್ರಕರಣಗಳು ವ್ಯಾಪಕವಾಗಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 6ರಿಂದ 11ನೇ ತರಗತಿ ಪರೀಕ್ಷೆ ನಡೆಸುವ ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಕೇರಳದ ಕೋವಿಡ್‌ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಪರೀಕ್ಷೆ ನಡೆಸುವ ಕೇರಳದ ನಿರ್ಧಾರಕ್ಕೆ ತಡೆ ನೀಡಿದೆ. ಕೇರಳದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ, ಒಂದು ವಾರ ಕಾಲ ಪರೀಕ್ಷೆ ತಡೆ ಹಿಡಿಯಲಾಗಿದೆ ಎಂದು ನ್ಯಾಯಮೂರ್ತಿಗಳಾದ … Continued

ರೋಗಿಗಳಿಗೆ ಸಮಾಧಾನಕರ ಸುದ್ದಿ.. ಬಿಪಿ, ಶುಗರ್, ಕ್ಯಾನ್ಸರ್ ಸೇರಿ ಸಾಮಾನ್ಯ ಬಳಕೆಯ 39 ಔಷಧಿಗಳ ಬೆಲೆ ಕಡಿಮೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ : ಕೇಂದ್ರ ಸರ್ಕಾರವು ಭಾರತೀಯ ರೋಗಿಗಳಿಗೆ ಒಳ್ಳೆಯ ಸುದ್ದಿ ನೀಡಿದ್ದು, ಸುಮಾರು 39 ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿದೆ. ಕ್ಯಾನ್ಸರ್ ವಿರೋಧಿ ಔಷಧಿಗಳು, ಮಧುಮೇಹ ವಿರೋಧಿ, ಎಂಟಿವೈರಲ್, ಬ್ಯಾಕ್ಟೀರಿಯಾ ವಿರೋಧಿ ಔಷಧಗಳು, ಎಂಟಿರೆಟ್ರೋವೈರಲ್ ಔಷಧಗಳು, ಟಿಬಿ ವಿರೋಧಿ ಔಷಧಗಳು ಮತ್ತು ಕೋವಿಡ್ ಚಿಕಿತ್ಸೆಯಲ್ಲಿ ಬಳಸಲಾಗುವ ಔಷಧಗಳು ಸೇರಿದಂತೆ ಸುಮಾರು 39 ಔಷಧಿಗಳ ಬೆಲೆಯನ್ನು ಕಡಿತಗೊಳಿಸಿದೆ. … Continued