ಮುಖೇಶ್ ಅಂಬಾನಿ ನಿವಾಸದ ಹೊರಗೆ ಸ್ಫೋಟಕ ಪತ್ತೆ -ಉದ್ಯಮಿ ಮನ್ಸುಖ್ ಹಿರೇನ್ ಸಾವಿನ ಪ್ರಕರಣ: 9,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಹಾಗೂ ಮನ್‍ಸುಖ್‍ ಹಿರೇನ್ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಚಾರ್ಜ್‌ಶೀಟ್‌ ಸಲ್ಲಿಸಿದೆ.

9,000ಕ್ಕೂ ಹೆಚ್ಚು ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಸಿದೆ. ಬಿಲಿಯನೇರ್ ಉದ್ಯಮಿ ಮುಖೇಶ್ ಅಂಬಾನಿಯವರ ನಿವಾಸ ಆಂಟಿಲಿಯಾ ಹೊರಗೆ ಫೆಬ್ರವರಿ 25 ರಂದು ಪತ್ತೆಯಾದ ಸ್ಫೋಟಕಗಳನ್ನು ತುಂಬಿದ ಎಸ್‌ಯುವಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬಂಧಿತ 10 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮುಂಬೈನ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಈ ಎರಡೂ ಪ್ರಕರಣಗಳಲ್ಲಿ ಸಚಿನ್‌ ವಾಜೆ ಪ್ರಮುಖ ಆರೋಪಿಯಾಗಿದ್ದಾರೆ.

ಸಚಿನ್ ವಾಜೆ ಮುಂಬೈನ ಪೊಲೀಸ್ ಅಧಿಕಾರಿ. ಉದ್ಯಮಿ ಮುಕೇಶ್‌ ಅಂಬಾನಿ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣದಲ್ಲಿ ಆರೋಪ ಕೇಳಿಬಂದ ಕಾರಣ ಬಂಧನಕ್ಕೊಳಗಾಗಿದ್ದರು.

ವಾಜೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಮಾ.13ರಂದು ವಶಕ್ಕೆ ಪಡೆದಿತ್ತು. ಅಲ್ಲಿಯವರೆಗೆ ವಾಜೆ ಅವರು ಮುಂಬೈ ನಗರ ಪೊಲೀಸ್ ಅಪರಾಧ ದಳದ ಅಪರಾಧ ಗುಪ್ತಚರ ಘಟಕದಲ್ಲೇ ಕಾರ್ಯನಿರ್ವಹಿಸುತ್ತಿದ್ದರು.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

ಅಂಬಾನಿ ಅವರ ‘ಅಂಟಿಲಿಯಾ’ ಐಷಾರಾಮಿ ನಿವಾಸದ ಬಳಿ ಫೆಬ್ರುವರಿ 24ರ ಮಧ್ಯರಾತ್ರಿ ಜಿಲೆಟಿನ್‌ ಕಡ್ಡಿಗಳನ್ನು ತುಂಬಿದ್ದ ಎಸ್‌ಯುವಿಯನ್ನು ನಿಲ್ಲಿಸಲಾಗಿತ್ತು. ಸುಮಾರು 20 ಜಿಲೆಟಿನ್ ಕಡ್ಡಿಗಳು ಮತ್ತು ಬೆದರಿಕೆ ಪತ್ರ ಅದರಲ್ಲಿ ಪತ್ತೆಯಾಗಿತ್ತು.

ಅಂಬಾನಿ ನಿವಾಸದ ಬಳಿ ಪತ್ತೆಯಾಗಿದ್ದ ಎಸ್‌ಯುವಿ ಮನ್‍ಸುಖ್‍ ಹಿರೇನ್ ಅವರಿಗೆ ಸೇರಿದೆ ಎಂದು ಪೊಲೀಸರು ಖಚಿತಪಡಿಸಿದ್ದರು. ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಅವರಿಗೆ ಮನ್‌ಸುಖ್‌ ಹಿರೇನ್‌ ಆಪ್ತರಾಗಿದ್ದರೆಂದು ತಿಳಿದುಬಂದಿತ್ತು.

ಪುಣೆಯಲ್ಲಿ ಕಾರು ಬಿಡಿಭಾಗಗಳ ಮಾರಾಟದ ವ್ಯವಹಾರ ನಡೆಸುತ್ತಿದ್ದ ಮನ್‍ಸುಖ್‍ ಹಿರೇನ್ (48) ಮಾರ್ಚ್‌ 4ರಿಂದ ನಾಪತ್ತೆಯಾಗಿದ್ದರು. ಅವರ ಶವವು ನಂತರ ಶಂಕಾಸ್ಪದ ರೀತಿಯಲ್ಲಿ ಠಾಣೆಯ ಮುಂಬೈ-ಕಾಲ್ವಾದಲ್ಲಿ ರೇಟಿ ಬಂದರ್ ಸಮೀಪ ಪತ್ತೆಯಾಗಿತ್ತು.

 

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement