ಕರ್ನಾಟಕದ ಮುಂದಿನ ಚುನಾವಣೆಗೆ ಸಿಎಂ ಬೊಮ್ಮಾಯಿ ನೇತೃತ್ವ: ಅಮಿತ್‌ ಶಾ ಹೇಳಿಕೆಗೆ ಶೆಟ್ಟರ್ ಹೇಳಿದ್ದೇನು?

ಹುಬ್ಬಳ್ಳಿ: “ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಯಲ್ಲಿ ಪ್ರಕಟಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹುಬ್ಬಳ್ಳಿಯಲ್ಲಿ ಶುಕ್ರವಾರ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯ ನೇತೃತ್ವವನ್ನು ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ನೀಡಿದ್ದು ಒಳ್ಳೆಯ ಸಂಗತಿ,” ಎಂದು ಶೆಟ್ಟರ ಅಭಿಪ್ರಾಯಪಟ್ಟಿದ್ದಾರೆ.
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ನಡೆಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ್ದಾರೆ. ಇದಕ್ಕೆ ತಮ್ಮ ಸಹಮತ ಇದೆ. ಬಿಜೆಪಿ ಹೈಕಮಾಂಡ್ ನಿರ್ಧಾರದಂತೆ ನಾವೂ ಮುಂದುವರೆಯುತ್ತೇವೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಚುನಾವಣೆ ಇನ್ನೂ ದೂರ ಇದೆ ಎಂದ ಅವರು, ಸರ್ಕಾರದಲ್ಲಿ ಹಿರಿಯರನ್ನು ಕಡೆಗಣಿಸಿದ ಬಗ್ಗೆ ಈಗಾಗಲೇ ನಾವು ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ನಾನು ಪ್ರಚಾರ ಮಾಡಿರುವೆ. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 82 ಸ್ಥಾನಗಳಲ್ಲಿ 60ಕ್ಕೂ ಸ್ಥಾನಗಳನ್ನು ಗೆಲ್ಲುತ್ತದೆ.
ಟಿಕೆಟ್ ಆಕ್ಷಾಂಕಿಗಳ ಮಧ್ಯೆ ಸಾಕಷ್ಟು ಪೈಪೋಟಿ ಇತ್ತು. 700ಕ್ಕೂ ಹೆಚ್ಚು ಜನರು ಆಕ್ಷಾಂಕಿಗಳಿದ್ದರು. ಹೀಗಾಗಿ ಕೆಲವು ಕಡೆ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಬಂಡಾಯದ ಮಧ್ಯೆಯೂ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement