ಮೈಸೂರು ದಸರಾ ಮಹೋತ್ಸವ ಸರಳ ಆಚರಣೆಗೆ ನಿರ್ಧಾರ

ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷವೂ ಸರಳವಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತದೆ.
ದಸರಾ ಮಹೋತ್ಸವದ ಕುರಿತಾದ ಉನ್ನತ ಮಟ್ಟದ ಸಭೆಯ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅಕ್ಟೋಬರ್ 7 ರಂದು ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ. ಅಕ್ಟೋಬರ್ 15 ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ದಸರಾ ಮಹೋತ್ಸವಕ್ಕಾಗಿ 6 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು. ಆಚರಣೆ ಕುರಿತು ಮತ್ತೊಂದು ಸುತ್ತಿನ ಸಭೆಯನ್ನು ನಡೆಸಲಾಗುವುದು. ಕಳೆದ ಸಲ ದಸರಾ ಉದ್ಘಾಟನೆಗೆ 150 ಜನರಿಗೆ ಅವಕಾಶ ನೀಡಲಾಗಿತ್ತು. ಜಂಬೂಸವಾರಿಗೆ 200 ಜನರಿಗೆ ಅವಕಾಶ ನೀಡಲಾಗಿತ್ತು. ಈ ಸಲ ಹೆಚ್ಚು ಜನರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಸೆಪ್ಟಂಬರ್ 20ರ ಬಳಿಕ ಕೋವಿಡ್‌ ಸ್ಥಿತಿಗತಿ ಅವಲೋಕಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.
ಅಕ್ಟೋಬರ್ 7 ರ ಬೆಳಗ್ಗೆ 8.15 ಕ್ಕೆ ಉದ್ಘಾಟನೆ ನಡೆಯಲಿದ್ದು, ಉದ್ಘಾಟಕರನ್ನು ಆಹ್ವಾನಿಸುವ ಅಧಿಕಾರವನ್ನು ಮುಖ್ಯಮಂತ್ರಿಳಿಗೆ ನೀಡಲು ಸಭೆ ನಿರ್ಧರಿಸಿದೆ.
ಕಳೆದ ವರ್ಷದಂತೆ ಈ ಬಾರಿಯೂ ಅರಮನೆ ಆವರಣದಲ್ಲಿ ಜಂಬೂ ಸವಾರಿ, ವರ್ಚುವಲ್ ವೇದಿಕೆಯಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯುತ್ ದೀಪಾಲಂಕಾರ ಈ ಬಾರಿಯೂ ಇರಲಿದೆ. ಉದ್ಘಾಟನೆ, ಜಂಬೂ ಸವಾರಿ, 9 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಷ್ಟು ಜನ ಇರಬೇಕೆಂದು ಸೆಪ್ಟೆಂಬರ್ 15 ರಂದು ನಿಗದಿಪಡಿಸಲಾಗುತ್ತದೆ.

ಪ್ರಮುಖ ಸುದ್ದಿ :-   ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್​ ಉಚ್ಚಾಟನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement